Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಡಿ.ಕೆ. ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್‌
ಕರ್ನಾಟಕಪ್ರಮುಖ

ನ್ಯಾಷನಲ್‌ ಹೆರಾಲ್ಡ್‌ ಕೇಸ್‌: ಡಿ.ಕೆ. ಶಿವಕುಮಾರ್‌ಗೆ ದೆಹಲಿ ಪೊಲೀಸರಿಂದ ನೋಟಿಸ್‌

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸೆಂಬರ್.19ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ದೆಹಲಿ ಪೊಲೀಸರು ನೋಟಿಸ್ ನೀಡಿದ್ದಾರೆ.

ನೋಟಿಸ್ ನಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹಣಕಾಸು ಮತ್ತು ವಹಿವಾಟಿನ ವಿವರಗಳನ್ನು ಕೋರಿದ್ದಾರೆ. ಅಲ್ಲದೇ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನಲೆಯಲ್ಲಿ ಈ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಅಕ್ಟೋಬರ್ 3 ರಂದು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಪ್ರಮುಖ ಮಾಹಿತಿ ಹೊಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಡಿಕೆಶಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಯಂಗ್‌ ಇಂಡಿಯಾಗೆ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ವೈಯಕ್ತಿಕವಾಗಿ 2.5 ಕೋಟಿ ರೂ. ದೇಣಿಗೆ ನೀಡಿದ್ದರು. ಇಷ್ಟೇ ಅಲ್ಲದೇ ಡಿಕೆ ಅವರ ಟ್ರಸ್ಟ್‌ಗಳಿಂದ 2.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಹೀಗಾಗಿ ಈ ಹಿಂದೆ ಡಿಕೆ ಸಹೋದರರನ್ನು ಇಡಿ ವಿಚಾರಣೆ ನಡೆಸಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಹಣಕಾಸು, ವಹಿವಾಟಿನ ವಿವರಗಳನ್ನು ಕೋರಿ‌ ದೆಹಲಿ ಪೊಲೀಸ್, ವಿಚಾರಣೆಗೆ ಹಾಜರಾಗುವಂತೆ ಡಿಕೆ ಶಿವಕುಮಾರ್ಗೆ ನೋಟಿಸ್ ನೀಡಿದೆ.
ನ್ಯಾಷನಲ್ ಹೆರಾಲ್ಡ್ ಕೇಸ್ ಹಿನ್ನೆಲೆ
ನ್ಯಾಷನಲ್ ಹೆರಾಲ್ಡ್ ಒಂದು ಇಂಗ್ಲಿಷ್ ದಿನಪತ್ರಿಕೆಯಾಗಿದೆ. ಇದನ್ನು 1938ರಲ್ಲಿ ಜವಾಹರಲಾಲ್ ನೆಹರು ಸ್ಥಾಪಿಸಿದ್ದು, ಇದನ್ನು AJL ಪ್ರಕಾಶಿಸುತ್ತಿತ್ತು, ಜೊತೆಗೆ ಕೌಮಿ ಆವಾಜ್ (ಉರ್ದು) ಮತ್ತು ನವಜೀವನ್ (ಹಿಂದಿ) ಪತ್ರಿಕೆಗಳನ್ನೂ ಪ್ರಕಾಶಿಸಿತು. 2008ರಲ್ಲಿ ಆರ್ಥಿಕ ತೊಂದರೆಯಿಂದಾಗಿ AJL ಪತ್ರಿಕೆಯನ್ನು ಸ್ಥಗಿತಗೊಳಿಸಿತು, ಆಗ 90.25 ಕೋಟಿ ರೂ. ಸಾಲವನ್ನು ಕಾಂಗ್ರೆಸ್ ಪಕ್ಷದಿಂದ ಪಡೆದಿತ್ತು. ಬಿಜೆಪಿ ಸುಬ್ರಮಣಿಯನ್ ಸ್ವಾಮಿ ಅವರು, ಕಾಂಗ್ರೆಸ್ ಪಕ್ಷವು AJLಗೆ ನೀಡಿದ 90.25 ಕೋಟಿ ಸಾಲವನ್ನು ಯಂಗ್ ಇಂಡಿಯಾ (YIL) ಕಂಪನಿಗೆ 50 ಲಕ್ಷಕ್ಕೆ ವರ್ಗಾಯಿಸಿತು ಎಂದು ಆರೋಪಿಸಿದ್ದರು. YILನಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯವರು ಶೇ.76ರಷ್ಟು ಷೇರುಗಳನ್ನು ಹೊಂದಿದ್ದಾರೆ. ಈ ವರ್ಗಾವಣೆಯ ಮೂಲಕ AJLನ 2,000 ಕೋಟಿಗಿಂತಲೂ ಹೆಚ್ಚು ಮೌಲ್ಯದ ಆಸ್ತಿಗಳನ್ನು YIL ‘ದುರುದ್ದೇಶದಿಂದ’ ತನ್ನ ವಶಕ್ಕೆ ತೆಗೆದುಕೊಂಡಿತು ಎಂದು ಆರೋಪ. ಈ ವಹಿವಾಟು ವಂಚನೆ, ವಿಶ್ವಾಸ ದ್ರೋಹ, ಮತ್ತು ಹಣದ ಅಕ್ರಮ ವರ್ಗಾವಣೆ ಗೆ ಸಂಬಂಧಿಸಿದೆ ಎಂದು ದೂರಲಾಗಿದೆ.
2014ರಲ್ಲಿ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೋಮತಿ ಮನೋಚಾ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಿದರು, YIL ಒಂದು ‘ನಕಲಿ’ ಕಂಪನಿಯಾಗಿ ಸಾರ್ವಜನಿಕ ಹಣವನ್ನು ವೈಯಕ್ತಿಕ ಉಪಯೋಗಕ್ಕೆ ಬಳಸಲಾಗಿದೆ ಎಂದು ಆರೋಪ. 2015ರಲ್ಲಿ ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಪಟಿಯಾಲಾ ಹೌಸ್ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತು. ಜಾರಿ ನಿರ್ದೇಶನಾಲಯ (ED) 2014ರಿಂದ ಈ ಕೇಸ್‌ನಲ್ಲಿ ಹಣದ ಅಕ್ರಮ ವರ್ಗಾವಣೆ ತನಿಖೆ ನಡೆಸುತ್ತಿದೆ. 2023ರಲ್ಲಿ 751.9 ಕೋಟಿ ಮೌಲ್ಯದ AJL ಆಸ್ತಿಗಳನ್ನು ಜಪ್ತಿ ಮಾಡಿದೆ.
2025ರ ಏಪ್ರಿಲ್‌ನಲ್ಲಿ ED ಸೋನಿಯಾ, ರಾಹುಲ್, ಮತ್ತು ಸ್ಯಾಮ್ ಪಿತ್ರೋಡಾ ವಿರುದ್ಧ ಚಾರ್ಜ್‌ಶೀಟ್ ದಾಖಲಿಸಿತು. ಕಾಂಗ್ರೆಸ್ ಪಕ್ಷವು ಈ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ಕರೆದು, YIL ಒಂದು ‘ಲಾಭರಹಿತ’ ಕಂಪನಿಯಾಗಿದ್ದು, ಯಾವುದೇ ಆರ್ಥಿಕ ಲಾಭವನ್ನು ಒದಗಿಸಿಲ್ಲ ಎಂದು ವಾದಿಸಿದೆ.
AJL ಆಸ್ತಿಗಳನ್ನು ವರ್ಗಾಯಿಸಲಾಗಿಲ್ಲ, ಮತ್ತು ಸಾಲವನ್ನು ಷೇರುಗಳಾಗಿ ಪರಿವರ್ತಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. 2025ರ ಮೇ 21ರಂದು, ED ದೆಹಲಿ ನ್ಯಾಯಾಲಯಕ್ಕೆ ಸೋನಿಯಾ ಮತ್ತು ರಾಹುಲ್ ಗಾಂಧಿಯವರು 142 ಕೋಟಿ ಅಪರಾಧ ಆದಾಯವನ್ನು ಪಡೆದಿದ್ದಾರೆ ಎಂದು ಆರೋಪಿಸಿದೆ.

ಕಾರ್‌ನಿಂದ ಇಳಿದ ತಕ್ಷಣ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಯಾರಿಗೆ?ವೈರಲ್ ವಿಡಿಯೋ ನೋಡಿ

TAGGED:National Herald case: Delhi Police issues notice to D.K. Shivakumar
Share This Article
Facebook Twitter Copy Link Print
Previous Article ಮತಾಂತರ ಮತ್ತು ಕೊಲೆ ಬೆದರಿಕೆ; ವಿವಾಹಿತ ಮಹಿಳೆ ಆತ್ಮಹತ್ಯೆ
Next Article ಮಿತಿಮೀರಿ ಮಾತಾಡಿದ ಗಿಲ್ಲಿಗೆ ಈ ವಾರದ ಕಳಪೆ ಪಟ್ಟ; ಎಡವಿದ್ದು ಎಲ್ಲಿ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?