Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಡಿಜಿ ಐಜಿಪಿ ನೀಡಿದ ಸೂಚನೆಯೇನು?
ಕರ್ನಾಟಕಪ್ರಮುಖ

ಪೊಲೀಸರೇ ಅಪರಾಧಗಳಲ್ಲಿ ಶಾಮೀಲು; ಡಿಜಿ ಐಜಿಪಿ ನೀಡಿದ ಸೂಚನೆಯೇನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಡಿಜಿ ಹಾಗೂ ಐಜಿಪಿ ಸಲೀಂ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಕಟ್ಟೆಚ್ಚರ ಸೂಚನೆ ಹೊರಡಿಸಿದ್ದಾರೆ.
ಪೊಲೀಸರೇ ಅಪರಾಧ ಪ್ರಕರಣಗಳಲ್ಲಿ ಶಾಮೀಲಾಗುತ್ತಿರುವುದರಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಎಂದಿರುವ ಅವರು, ಅಪರಾಧ ಕೃತ್ಯದಲ್ಲಿ ಶಾಮೀಲಾಗುವ ಅಧಿಕಾರಿ ಅಥವಾ ಸಿಬ್ಬಂದಿ ಶಿಸ್ತಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಜ್ಞಾಪನಾ ಪತ್ರದ ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಿದ್ದಾರೆ. ಅಲ್ಲದೆ, ಘಟಕಾಧಿಕಾರಿಗಳಿಗೆ ಹಲವು ಅಂಶಗಳ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಡಿಜಿ, ಐಜಿಪಿ ಸಲೀಂ ಪೊಲೀಸರಿಗೆ ನೀಡಿರುವ ಸೂಚನೆ ಏನು?

  • ಘಟಕದ ಎಲ್ಲಾ ಅಧಿಕಾರಿಗಳು ಅಧೀನದ ಪೊಲೀಸ್ ಸಿಬ್ಬಂದಿಯವರ ಮೇಲೆ ನಿಗಾ ವಹಿಸಬೇಕು.
  • ನೈತಿಕ ಮಾನದಂಡಗಳು, ಕಾನೂನುಬದ್ಧ ಕರ್ತವ್ಯಗಳು, ಮತ್ತು ಭ್ರಷ್ಟಾಚಾರ , ಅಪರಾಧಗಳ ಗಂಭೀರ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು.
  • ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
  • ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ದುರ್ವರ್ತನೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಗಳನ್ನು ತಕ್ಷಣವೇ ಪೊಲೀಸ್ ಪ್ರಧಾನ ಕಛೇರಿಗೆ ವರದಿ ಮಾಡಬೇಕು.
  • ಇಲಾಖೆಯ ಘನತೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸಮಗ್ರತೆಯ ಸಂಸ್ಕೃತಿಯು ಅಧಿಕಾರಿ ಮತ್ತು ಸಿಬ್ಬಂದಿಗಳ ಸಮಾನ ಹೊಣೆಗಾರಿಕೆಯಾಗಿರುತ್ತದೆ.
  • ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ಮನೋಬಲ ಕಗ್ಗುವಿಕೆಯನ್ನು ಮತ್ತು ಇತರ ನೈತಿಕ ಲೋಪದೋಷಗಳಿಗೆ ಕಾರಣವಾಗುವ ಅಂಶಗಳಿಗೆ ಸೂಕ್ತವಾಗಿ ಸ್ಪಂದಿಸಬೇಕು.
  • ಪ್ರಸ್ತುತ ಜಾರಿಯಲ್ಲಿರುವ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು.
  • ಈ ನೀತಿ ಸಂಹಿತೆಯು ಅಡ್ಡದಾರಿಗಳಿಗೆ ಆಸ್ಪದವಾಗದಂತೆ ಕ್ರಮವಹಿಸಬೇಕು. ಇಲಾಖೆಯಲ್ಲಿ ದುರ್ನಡತೆಯನ್ನು ತಡೆಯುವ ಮೇಲ್ಕಂಡ ಎಲ್ಲಾ ಕ್ರಮಗಳನ್ನು ಅನುಷ್ಠಾನಗೊಳಿಸಲು ಸೂಚನೆ.
  • ಅನುಷ್ಠಾನಗೊಳಿಸುವಲ್ಲಿ ವಿಫಲರಾಗುವ ಘಟಕಾಧಿಕಾರಿಗಳ ವಿರುದ್ಧ ಘೋರ ನಿರ್ಲಕ್ಷತೆ ಎಂದು ಪರಿಗಣನೆ ಮಾಡಲಾಗುತ್ತೆ.
  • ನಿರ್ಲಕ್ಷ್ಯತೆ ತೋರಿದರೆ‌ ಇಲಾಖಾ ಶಿಸ್ತಿನ ಕ್ರಮಕ್ಕೆ ಗುರಿಪಡಿಸಲಾಗುವುದು. ಪೊಲೀಸ್ ಇಲಾಖೆಯ ಘನತೆ, ಗೌರವ ಮತ್ತು ಸಮಗ್ರತೆಗಳಲ್ಲಿನ ರಾಜಿ ಸಮಂಜಸವಲ್ಲ ಮತ್ತು ಸಹಿಸಲು ಸಾಧ್ಯವಿಲ್ಲ.
  • ಪೊಲೀಸ್ ಇಲಾಖೆಯ ಹಿರಿಮೆ ಮತ್ತು ಗೌರವಾದರಗಳನ್ನು ಹೆಚ್ಚಿಸುವ ಶಿಸ್ತುಬದ್ಧ, ಜವಾಬ್ದಾರಿಗಳು ಘಟಕಾಧಿಕಾರಿಗಳದ್ದಾಗಿರುತ್ತದೆ
  • ಇಲಾಖೆಯ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂಬುದನ್ನು ನಾವು ಮರೆಯಕೂಡದು ಎಂದು ಎಚ್ಚರಿಕೆ.

ಪುಟಿನ್ ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ

TAGGED:Police are involved in crimes; what is the instruction given by the DG IGP?
Share This Article
Facebook Twitter Copy Link Print
Previous Article ಪುಟಿನ್ ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ
Next Article ಬ್ಯಾನರ್ ತೆರವು ವಿಚಾರವಾಗಿ ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?