Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka politics ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಿದ್ದರಾಮಯ್ಯಗೆ ಸಿಕ್ತು ಹೈಕಮಾಂಡ್ ಸಂದೇಶ
ಕರ್ನಾಟಕದೇಶಪ್ರಮುಖ

Karnataka politics ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಿದ್ದರಾಮಯ್ಯಗೆ ಸಿಕ್ತು ಹೈಕಮಾಂಡ್ ಸಂದೇಶ

Share
4 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/you

newsics.com

ಕಾಂಗ್ರೆಸ್ ಪಕ್ಷದ ಭವಿಷ್ಯ ಹಾಗೂ ಮುಂದಿನ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದು, ಅದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲುಪಿಸಿದ್ದಾರೆ.

ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ಪುನರ್ ರಚನೆ ಸೇರಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದಂತೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕೇಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಡಿ.ಕೆ.ಶಿವಕುಮಾರ್ ಕೂಡ ಅದನ್ನು ಅನುಮೋದಿಸಿದ್ದರು.

ಎರಡು ಉಪಾಹಾರ ಕೂಟದ ಬಳಿಕ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ನಡುವಿನ ಹಗ್ಗ-ಜಗ್ಗಾಟ ತಗ್ಗಿದಂತಾಗಿದ್ದು, ಈಗ ತಿಳಿಯಾದ ವಾತಾವರಣ ನಿರ್ಮಾಣವಾಗಿದೆ.

ಪಕ್ಷ ಸಂಘಟನೆ ಹಾಗೂ ಮುಂದಿನ ದಿನಗಳಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆಯತ್ತ ಎಲ್ಲಾ ನಾಯಕರು ದೃಷ್ಟಿ ನೆಟ್ಟಿದ್ದಾರೆ.

ಈ ನಡುವೆ ಸಿದ್ದರಾಮಯ್ಯ ಅವರಲ್ಲಿದ್ದ ಗೊಂದಲಕ್ಕೆ ಹೈಕಮಾಂಡ್ ಸಮಾಧಾನ ಹೇಳಿದೆ. ನಿಮ್ಮ ಕೆಲಸ ನೀವು ಮುಂದುವರಿಸಿ, ಯಾವುದೇ ಚಿಂತೆ ಬೇಡ ಎಂಬ ಚುಟುಕು ಸಂದೇಶವನ್ನು ಮಂಗಳೂರಿಗೆ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸಿದ್ದರಾಮಯ್ಯನವರಿಗೆ ಸೂಚ್ಯವಾಗಿ ರವಾನಿಸಿದ್ದಾರೆ ಎನ್ನಲಾಗಿದೆ.

ಕರ್ನಾಟಕ, ತೆಲಂಗಾಣ ಮತ್ತು ಹಿಮಾಚಲ ಪ್ರದೇಶ ಸೇರಿ ಇಡೀ ದೇಶದಲ್ಲಿ ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಆಡಳಿತವಿದೆ. ನಾಯಕತ್ವ ಬದಲಾವಣೆಯಿಂದಾಗಿ ಕರ್ನಾಟಕದಲ್ಲಿ ಅಧಿಕಾರ ಕಳೆದುಕೊಂಡರೆ ದೇಶದಲ್ಲೇ ಭಾರೀ ಪ್ರಮಾಣದ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಲೆಕ್ಕಚಾರ ಕಾಂಗ್ರೆಸ್ ಹೈಕಮಾಂಡ್ ನಲ್ಲಿದೆ ಎನ್ನಲಾಗಿದೆ.

ಸದ್ಯಕ್ಕೆ ಮೂರು ರಾಜ್ಯಗಳಲ್ಲೂ ಯಥಾಸ್ಥಿತಿ ಮುಂದುವರಿಸಲು ಹೈಕಮಾಂಡ್ ನಿರ್ಧರಿಸಿದೆ. ಈ ಮೊದಲು ರಾಜಸ್ಥಾನ, ಮಧ್ಯಪ್ರದೇಶ, ಪಂಜಾಬ್ ಸೇರಿದಂತೆ ಮತ್ತಿತರ ರಾಜ್ಯಗಳಲ್ಲಿ ಪರ್ಯಾಯ ನಾಯಕತ್ವಕ್ಕೆ ಮಣೆ ಹಾಕುವ ಪ್ರಯೋಗ ಮಾಡಿ ಕಾಂಗ್ರೆಸ್ ಕೈ ಸುಟ್ಟುಕೊಂಡಿದೆ. ಗೆಲ್ಲಬಹುದಾದ ರಾಜ್ಯಗಳನ್ನು ಕಳೆದುಕೊಂಡಿದೆ.

ಕರ್ನಾಟಕದಲ್ಲಿ ಡಿ.ಕೆ.ಶಿವಕುಮಾರ್ ಅವರ ಒತ್ತಡಕ್ಕೆ ಮಣಿದು ನಾಯಕತ್ವ ಬದಲಾವಣೆ ಮಾಡಿದರೆ ಅಹಿಂದ ವರ್ಗ ಕಾಂಗ್ರೆಸ್ ಋ್ದನಿಂದ ದೂರವಾಗುವ ಹೆದರಿಕೆ ಕಾಂಗ್ರೆಸ್ ನಲ್ಲಿದೆ ಎನ್ನಲಾಗಿದೆ.

ದೇಶದಲ್ಲೇ ಕಾಂಗ್ರೆಸ್ ಗೆ ಪ್ರಬಲವಾದ ಅಹಿಂದ ನಾಯಕರಿಲ್ಲದೆ ಇರುವುದು ದೊಡ್ಡ ಕೊರತೆಯಾಗಿದೆ. ಸಿದ್ದರಾಮಯ್ಯ ಅವರು ಅಹಿಂದ ನಾಯಕರಾಗಿ ಪ್ರಬಲವಾಗಿ ಗುರುತಿಸಿಕೊಂಡಿದ್ದು ಅವರನ್ನು ರಾಷ್ಟ್ರಮಟ್ಟದಲ್ಲಿ ಪ್ರತಿಬಿಂಬಿಸುವ ಪ್ರಯತ್ನ ನಡೆದಿತ್ತು. ಈ ಸಂದರ್ಭದಲ್ಲಿ ಅವರನ್ನು ಬದಲಾವಣೆ ಮಾಡಿದರೆ ಕಾಂಗ್ರೆಸ್ ಗೆ ಭಾರೀ ಪ್ರಮಾಣದ ಹಾನಿಯಾಗಬಹುದು ಎಂದು ಹೇಳಲಾಗುತ್ತಿದೆ.

ಅಲ್ಲದೆ, ಸಿದ್ದರಾಮಯ್ಯ ಉತ್ತಮ ಆಡಳಿತಗಾರರು ಮತ್ತು ಆರ್ಥಿಕವಾಗಿ ವಿಚಾರಗಳಲ್ಲಿ ಅನುಭವಸ್ಥರು. ದೇಶದಲ್ಲೇ ಎಲ್ಲೂ ಇಲ್ಲದಂತಹ ಪಂಚಖಾತ್ರಿ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ.

ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ರಾಜ್ಯದ ಆರ್ಥಿಕ ವ್ಯವಸ್ಥೆ ಕೂಡ ಏರುಪೇರಾಗುವ ಆತಂಕ ಇದೆ. ಇದು ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲಾಗದ ಅಸಹಾಯಕ ಸ್ಥಿತಿ ನಿರ್ಮಿಸಬಹುದು. ಅದು ಮುಂದಿನ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗಳಿಗೆ 2026ರ ಮೇ ಮತ್ತು ಜೂನ್‌ನಲ್ಲಿ ಚುನಾವಣೆ ನಡೆಯಬೇಕಿದೆ. ಒಟ್ಟು 824 ವಿಧಾನಸಭಾ ಕ್ಷೇತ್ರಗಳ ಈ ರಾಜ್ಯಗಳ ಚುನಾವಣೆ ಕಾಂಗ್ರೆಸ್ ಪಾಲಿಗೆ ಅಳಿವು ಉಳಿವಿನ ಪ್ರಶ್ನೆಯಾಗಿದೆ.

ಕರ್ನಾಟಕದಲ್ಲಿ ಒಟ್ಟು 224, ಹಿಮಾಚಲ ಪ್ರದೇಶದಲ್ಲಿ 68, ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿದ್ದು, ಕರ್ನಾಟಕ ಹೊರತುಪಡಿಸಿದರೆ ಉಳಿದ ಎಲ್ಲಿಯೂ ದೊಡ್ಡ ರಾಜ್ಯವನ್ನು ಕಾಂಗ್ರೆಸ್ ಗೆದ್ದಿಲ್ಲ. ಕರ್ನಾಟಕದಲ್ಲಿ ಸ್ಥಿರ ಮತ್ತು ಅಭಿವೃದ್ಧಿ ಪರ ಆಡಳಿತ ನೀಡಿ ಮುಂದಿನ ದಿನಗಳಲ್ಲಿ ಅಸ್ಸಾಂ, ಪುದುಚೇರಿಯನ್ನು ಮರಳಿ ಗೆಲ್ಲುವುದು, ತಮಿಳುನಾಡಿನಲ್ಲಿ ಮಿತ್ರ ಪಕ್ಷವನ್ನು ಅಧಿಕಾರಕ್ಕೆ ತಂದು ಸರ್ಕಾರದ ಪಾಲುದಾರಿಕೆ ಮುಂದುವರಿಸುವುದು, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವುದು ಕಾಂಗ್ರೆಸ್ ಗೆ ಅನಿವಾರ್ಯವಾಗಿದೆ.

ಈ ಕಾರಣಕ್ಕೆ ರಾಜ್ಯ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಂತಹ ದುಸ್ಸಾಹ ಬೇಡ ಎಂದು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ. ಈ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲುಪಿಸಲಾಗಿದೆ. ಡಿ.ಕೆ.ಶಿವಕುಮಾರ್ ಅವರಿಗೂ ಮನವರಿಕೆ ಮಾಡಿಕೊಡುವ ಪ್ರಯತ್ನಗಳಾಗುತ್ತಿದೆ ಎನ್ನಲಾಗುತ್ತಿದೆ.

ಆದರೆ ಡಿ.ಕೆ.ಶಿವಕುಮಾರ್ ಪಟ್ಟು ಬಿಡದೆ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸ್ಪಷ್ಟನೆ ಪಡೆದುಕೊಳ್ಳಲು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಭೇಟಿಗೆ ಸಮಯ ನೀಡದೆ ಸತಾಯಿಸುತ್ತಿರುವುದು, ಕೆ.ಸಿ.ವೇಣುಗೋಪಾಲ್ ಅವರ ಸಂದೇಶವನ್ನು ದೃಢೀಕರಿಸಿದೆ.

ಜನವರಿ, ಮಾರ್ಚ್ ಎಂದು ಗಡುವುಗಳನ್ನು ನಿಗದಿ ಪಡಿಸಿಕೊಳ್ಳುವ ಮೂಲಕ ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಿದರೆ ಕಠಿಣ ಕ್ರಮ ಅನಿವಾರ್ಯ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ರವಾನಿಸಿದೆ. ಮಂಗಳೂರಿಗೆ ಕೆ.ಸಿ.ವೇಣುಗೋಪಾಲ್ ಆಗಮಿಸಿದಾಗ ಡಿಕೆ.. ಡಿಕೆ… ಎಂದು ಘೋಷಣೆ ಕೂಗಿದ ಮಿಥುನ್ ರೈ ಮತ್ತು ಬೆಂಬಲಿಗರಿಗೆ ಕೆಪಿಸಿಸಿ ಬದಲಾಗಿ ನೇರವಾಗಿ ಎಐಸಿಸಿಯಿಂದಲೇ ನೋಟಿಸ್ ಜಾರಿ ಮಾಡುವ ಮೂಲಕ ಕಠಿಣ ಸಂದೇಶ ರವಾನಿಸಲಾಗಿದೆ. ಇತ್ತ ಸಿದ್ದರಾಮಯ್ಯ ಅವರ ಪರವಾಗಿ ಘೋಷಣೆ ಕೂಗಿದ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾರಿಗೂ ನೋಟಿಸ್ ನೀಡಲಾಗಿದೆ. ಈ ಮೂಲಕ ಹೈಕಮಾಂಡ್ ಶಿಸ್ತು ಪಾಲನೆ ವಿಷಯದಲ್ಲಿ ಅಖಾಡ ಪ್ರವೇಶಿಸಿವ ಸುಳಿವು ನೀಡಿದೆ.

ಬೆಂಗಳೂರು, ಡಿ.5- ಕಾಂಗ್ರೆಸ್ ಪಕ್ಷದ ಭವಿಷ್ಯ ಹಾಗೂ ಮುಂದಿನ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದು, ಅದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲುಪಿಸಿದ್ದಾರೆ.

TAGGED:There will be no change in the CM in the state: Siddaramaiah received a message from the high command
Share This Article
Facebook Twitter Copy Link Print
Previous Article Putin India Visit ಪುಟಿನ್ ಭೇಟಿಯಿಂದ ರಷ್ಯಾ-ಭಾರತ ಆರ್ಥಿಕ ಸಂಬಂಧ ಮತ್ತಷ್ಟು ಗಟ್ಟಿ, ನೋಡಿ ಸಮಗ್ರ ನೋಟ
Next Article HEALTH CARE ನೀವೆಷ್ಟು ವರ್ಷ ಬದುಕಬಲ್ಲಿರಿ, ನಿಮ್ಮ ಉಗುರು ನೋಡಿ ತಿಳಿಯಿರಿ…

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?