Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮದುವೆಗೆ ಮುನ್ನ ತೆಗೆಸುವ ‘ಪ್ರಿ-ವೆಡ್ಡಿಂಗ್ ಶೂಟಿಂಗ್’ ಮುಗಿಸಿ ವಾಪಸಾಗುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬೆಣಕಲ್ ಗ್ರಾಮದ ಬಳಿ ನಡೆದಿದೆ.
ಇದೇ ಡಿಸೆಂಬರ್ 20 ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧವಾಗಿದ್ದ ಭಾವಿ ದಂಪತಿಗಳು ಸ್ಮಶಾನ ಸೇರಿದ್ದಾರೆ. ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ನಿವಾಸಿ ಕರಿಯಪ್ಪ ಮಡಿವಾಳ (26) ಮತ್ತು ಕಾರಟಗಿ ತಾಲೂಕಿನ ಮುಷ್ಠೂರು ಗ್ರಾಮದ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ದುರ್ದೈವಿಗಳು. ಈ ಜೋಡಿಯ ಮದುವೆಗೆ ಸಕಲ ಸಿದ್ಧತೆಗಳು ನಡೆದಿತ್ತು. ಹೊಸಪೇಟೆ, ಪಂಪಾವನ, ಮತ್ತು ಮುನಿರಾಬಾದ್ ಸೇರಿದಂತೆ ಹಲವು ಕಡೆಗಳಲ್ಲಿ ತಮ್ಮ ಮದುವೆಯ ಪ್ರಿವೆಡ್ಡಿಂಗ್ ಫೋಟೋಶೂಟ್ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಭಾವಿ ದಂಪತಿಗಳು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ವೇಗವಾಗಿ ಬಂದ ಲಾರಿಯೊಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆಯಿಂದಾಗಿ ಎರಡೂ ಕುಟುಂಬಗಳಲ್ಲಿ ದುಃಖ ಮಡುವುಗಟ್ಟಿದೆ. ಈ ಕುರಿತು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್ ಇಂಡಿಯಾ ಆಟಗಾರ್ತಿಯರು ತಗೊಂಡ ನಿರ್ಧಾರವೇನು?