Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Couple dies ಲಾರಿ ಡಿಕ್ಕಿ: ಪ್ರಿ-ವೆಡ್ಡಿಂಗ್ ಶೂಟ್ ಮುಗಿಸಿ ಮರಳುತ್ತಿದ್ದ ಜೋಡಿ ಸಾವು
ಕರ್ನಾಟಕಪ್ರಮುಖ

Couple dies ಲಾರಿ ಡಿಕ್ಕಿ: ಪ್ರಿ-ವೆಡ್ಡಿಂಗ್ ಶೂಟ್ ಮುಗಿಸಿ ಮರಳುತ್ತಿದ್ದ ಜೋಡಿ ಸಾವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಪ್ರಿ ವೆಡ್ಡಿಂಗ್ ಶೂಟಿಂಗ್ ಬಳಿಕ ದುರಂತ ಅಂತ್ಯ ಕಂಡ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.ಮದುವೆಗೆ ಕೆಲ ದಿನಗಳು ಮಾತ್ರ ಬಾಕಿ ಇತ್ತು. ಮದುವೆಗೂ ಮುನ್ನ ಸಾಮಾನ್ಯವಾಗಿರುವ ಪ್ರೀ ವೆಡ್ಡಿಂಗ್ ಫೋಟೋ ಶೂಟಿಂಗ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿಯಾಗಿದೆ. ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಭಾವೀ ದಂಪತಿ ಮೃತಪಟ್ಟಿದ್ದಾರೆ.ಕೊಪ್ಪಳದ ಗಂಗಾವತಿಯ ದಾಸನಾಳ ಸಮೀಪದ ಬಂಡ್ರಾಳದ ವೆಂಕಟಗಿರಿ ಕ್ರಾಸ್ ಬಳಿ ನಡೆದಿದೆ.26 ವರ್ಷದ ಕರಿಯಪ್ಪ ಮಡಿವಾಳ ಹಾಗೂ 19 ವರ್ಷದ ಕವಿತಾ ಪವಾಡೆಪ್ಪ ಪ್ರಿ ವೆಡ್ಡಿಂಗ್ ಶೂಟಿಂಗ್ ಮಾಡಲು ಹೊಸಪೇಟೆಯ ಪಂಪಾವನ ಮುನಿರಾಬಾದ್‌ಗೆ ತೆರಳಿದ್ದರು. ಫೋಟೋಗ್ರಾಫರ್ ಈ ಸ್ಥಳ ಸೂಚಿಸಿದ್ದರು. ಹೀಗಾಗಿ ಇಬ್ಬರು ಬೈಕ್‌ನಲ್ಲಿ ತೆರಳಿ ಖುಷಿ ಖುಷಿಯಿಂದ ಪ್ರಿ ವೆಡ್ಡಿಂಗ್ ಫೋಟೋ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದರು. ಫೋಟೋ ಹಾಗೂ ವಿಡಿಯೋ ಶೂಟಿಂಗ್ ಸಂಜೆವರೆಗೂ ನಡೆದಿತ್ತು. ಕತ್ತಲಾಗುತ್ತಿದ್ದಂತೆ ಶೂಟಿಂಗ್ ಮುಗಿಸಿದ ಭಾವೀ ದಂಪತಿ ಬೈಕ್ ಮೂಲಕ ಮರಳಿದ್ದಾರೆ. ಕವಿತಾ ಪವಾಡೆಪ್ಪಳನ್ನು ಆಕೆಯ ಕಾರಟಗಿ ತಾಲೂಕಿನ ಮುಷ್ಠೂರು ಗ್ರಾಮಕ್ಕೆ ಬಿಟ್ಟು, ತಾನು ಕೊಪ್ಪಳದ ಇರಕಲಗಡ ಗ್ರಾಮಕ್ಕೆ ತೆರಳಲು ಪ್ಲಾನ್ ಮಾಡಿದ್ದರು. ಇದರಂತೆ ಬೈಕ್‌ನಲ್ಲಿ ಸಾಗುತ್ತಿದ್ದಂತೆ ಏಕಾಏಕಿ ಬಂದ ಲಾರಿ ಡಿಕ್ಕಿಯಾಗಿದೆ.

ಡಿಸೆಂಬರ್ 21ಕ್ಕೆ ನಿಗದಿಯಾಗಿದ್ದ ಮದುವೆ:

ಕರಿಯಪ್ಪ ಮಡಿವಾಳ ಹಾಗೂ ಕವಿತಾ ಪವಾಡೆಪ್ಪ ಇಬ್ಬರ ಎಂಗೇಜ್‌ಮೆಂಟ್ ನವೆಂಬರ್ 21ರಂದು ನಡೆದಿತ್ತು. ಬಳಿಕ ಮದುವೆ ತಯಾರಿಗಳು ಆರಂಭಗೊಂಡಿದ್ದವು.ಕಳೆದೆರಡು ವಾರದಿಂದ ಇಬ್ಬರು ಆಪ್ತರು, ಕುಟುಂಬಸ್ಥರನ್ನು ಮದುವೆಗೆ ಆಮಂತ್ರಿಸಲು ಆರಂಭಿಸಿದ್ದರು. ಪ್ರಿ ವೆಡ್ಡಿಂಗ್ ಫೋಟೋ ಶೂಟ್‌ಗೆ ಸಮಯ ನಿಗದಿ ಮಾಡಿದ್ದರು. ಇದರಂತೆ ಭಾನುವಾರ ಪ್ರಿ ವೆಡ್ಡಿಂಗ್ ಶೂಟಿಂಗ್ ಮುಗಿಸಿ ಮರಳುವಾಗ ಅಪಘಾತ ಸಂಭವಿಸಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Sexual Health ದೈಹಿಕ ಸಂಪರ್ಕ ನಂತರದ ರಕ್ತಸ್ರಾವ ನಿರ್ಲಕ್ಷಿಸದಿರಿ, ಇದು ಅಪಾಯದ ಲಕ್ಷಣವೂ ಆಗಿರಬಹುದು!

Longest car ವಿಶ್ವದ ಅತಿ ಉದ್ದನೆಯ ಕಾರಿನ ಬಗ್ಗೆ ತಿಳಿದಿದೆಯೇ?

7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ

TAGGED:Lorry collision: Couple returning from pre-wedding shoot dies
Share This Article
Facebook Twitter Copy Link Print
Previous Article Goa fire tragedy ಗೋವಾ ಅಗ್ನಿ ದುರಂತ: ಕ್ಲಬ್‌ನ ಜನರಲ್ ಮ್ಯಾನೇಜರ್ ಅರೆಸ್ಟ್, ಮಾಲೀಕನಿಗೆ ವಾರಂಟ್
Next Article Couple dies ಲಾರಿ ಡಿಕ್ಕಿ: ಪ್ರಿ-ವೆಡ್ಡಿಂಗ್ ಶೂಟ್ ಮುಗಿಸಿ ಮರಳುತ್ತಿದ್ದ ಜೋಡಿ ಸಾವು

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?