Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ಪತ್ತೆಯಾದ ಲಕ್ಷಾಂತರ ರೂಪಾಯಿ ಹಣದ ಬಗ್ಗೆ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ. ನಟ ದರ್ಶನ್ ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಆದರೆ, ಪ್ರಕರಣದಲ್ಲಿರುವ ಇನ್ನಿತರ ಆರೋಪಿಗಳು ವಿಭಿನ್ನ ಹೇಳಿಕೆ ನೀಡುತ್ತಿದ್ದು, ದರ್ಶನ್ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
ಮನೆಯಲ್ಲಿ ಸಿಕ್ಕ ಹಣಕ್ಕೆ ಪಕ್ಕಾ ಲೆಕ್ಕ ಕೊಡಲು ಪ್ರದೋಷ್ ಅವರಿಂದ ಸಾಧ್ಯವಾಗಿಲ್ಲ. ಅವರ ಹೇಳಿಕೆಯಿಂದ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಮನೆಯಲ್ಲಿ ಸಿಕ್ಕ 30 ಲಕ್ಷ ರೂಪಾಯಿ ಹಣಕ್ಕೆ ಪ್ರದೋಷ್ ದ್ವಂದ್ವ ಉತ್ತರ ನೀಡಿದ್ದಾರೆ. ಇದರಿಂದಾಗಿ ದರ್ಶನ್ ಮತ್ತೆ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ದಟ್ಟವಾಗಿದೆ.
‘ಮನೆಯಲ್ಲಿ ಸಿಕ್ಕ ಹಣ ನನ್ನದಲ್ಲ. ನನ್ನ ಕುಟುಂಬಕ್ಕೂ ಸೇರಿದಲ್ಲ’ ಎಂದು ಪ್ರದೋಷ್ ಹೇಳಿಕೆ ನಿಡಿದ್ದಾರೆ. ಇದರಿಂದಾಗಿ ಹಲವು ಪ್ರಶ್ನೆಗಳು ಹುಟ್ಟಿಕೊಳ್ಳುವಂತಾಗಿದೆ. ಹಾಗಾದರೆ ಈ 30 ಲಕ್ಷ ರೂಪಾಯಿ ಹಣ ಎಲ್ಲಿಂದ ಬಂತು? ಕೊಟ್ಟವರು ಯಾರು ಎಂಬುದಕ್ಕೆ ಪ್ರದೋಷ್ ಉತ್ತರ ನೀಡಿಲ್ಲ. ಇದರಿಂದ ದರ್ಶನ್ ಅವರನ್ನು ಮತ್ತೆ ವಿಚಾರಣೆಗೆ ಒಳಪಡಿಸಲು ಐಟಿ ಅಧಿಕಾರಿಗಳು ತಯಾರಿ ಮಾಡಿಕೊಳ್ಳುತ್ತಿದ್ದಾರೆ.