Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್ಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಥಾಣೆಯಲ್ಲಿ ನಡೆದಿದೆ.
ಥಾಣೆ ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಈ ಹಲ್ಲೆ ನಡೆದಿದ್ದು, ಮಹಿಳೆಗೆ ಕೇಕ್‌ನಲ್ಲಿ ಮಾದಕ ದ್ರವ್ಯ ಬೆರೆಸಿ. ಬಳಿಕ ಕಾರಿನೊಳಗೆ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ಹಿರಾಲಾಲ್ ಕೇದಾರ್ ಮತ್ತು ರವಿ ಪವಾರ್ ಎಂದು ಗುರುತಿಸಲಾಗಿದೆ.
ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಳೆದ ವರ್ಷ ಆಗಸ್ಟ್ 25 ರಂದು ಈ ಘಟನೆ ನಡೆದಿತ್ತು. ಪದೇ ಪದೇ ಆಕೆಯನ್ನು ಬ್ಲಾಕ್ ಮೇಲ್ ಮಾಡಲು ಪ್ರಯತ್ನಿಸಿದ ನಂತರ, ಮಹಿಳೆ ಅಂತಿಮವಾಗಿ ಡಿಸೆಂಬರ್ 5 ರಂದು ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.