Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮುಂಬೈ: ಭೋಜಪುರಿ ನಟ ಪವನ್ ಸಿಂಗ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ನಟ ಸಲ್ಮಾನ್ ಖಾನ್ ಅವರೊಂದಿಗೆ ವೇದಿಕೆ ಹಂಚಿಕೊಳ್ಳದಂತೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಕರೆ ಮಾಡಿದ್ದ ವ್ಯಕ್ತಿ ನಾನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದಾನೆ. ಈ ಸಂಬಂಧ ಮುಂಬೈ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಹಿಂದಿಯಲ್ಲಿ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಪವನ್ ಸಿಂಗ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ ಹಾಕಿದೆ. ಬಿಗ್ ಬಾಸ್ ಫೈನಲ್ ವೇಳೆ ಸಲ್ಮಾನ್ ಖಾನ್ ಜೊತೆ ವೇದಿಕೆ ಹಂಚಿಕೊಂಡರೆ, ಮುಂದೆ ಎಂದಿಗೂ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಹಾಗೇ ಮಾಡ್ತೀವಿ ಎಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಪವನ್ ಸಿಂಗ್ ಆಪ್ತರಿಗೂ ಇದೇ ರೀತಿಯ ಕರೆಗಳು ಬಂದಿದ್ದು, ಕರೆ ಮಾಡಿದ್ದ ವ್ಯಕ್ತಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನಂತೆ. ನಟ ಪವನ್ ಸಿಂಗ್ ಅವರಿಗೆ ಲಾರೆನ್ಸ್ ಬಿಡೋಯ್ ಗ್ಯಾಂಗ್ ನಿಂದ ಬೆದರಿಕೆ ಬಂದ ಬಳಿಕ ಅವರ ಭದ್ರತೆಯನ್ನ ಹೆಚ್ಚಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.