Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಳಗಾವಿ: ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ರೈತರೊಂದಿಗೆ ಬೃಹತ್ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರನ್ನು ಹಲಗಾ ಗ್ರಾಮದ ಹೆದ್ದಾರಿ ಪಕ್ಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹಲವಾರು ಶಾಸಕರು, ಎಂಎಲ್‌ಸಿಗಳು ಮತ್ತು ಪಕ್ಷದ ಇತರ ಹಿರಿಯ ನಾಯಕರ ನೇತೃತ್ವದಲ್ಲಿ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾಕಾರರ ಬೃಹತ್ ಗುಂಪು ಜಮಾಯಿಸಿತು.
ನಂತರ ಮಾಲಿನಿ ಸಿಟಿಯಿಂದ ಸುವರ್ಣಸೌಧದ ಕಡೆಗೆ ಪ್ರತಿಭಟನೆ ರ‌್ಯಾಲಿ ತೆರಳಿತು. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ನಾಯಕರು, ರೈತರು ಪಾದಯಾತ್ರೆಯಲ್ಲಿ ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾ ಪಾದಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು, ರೈತರನ್ನು ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ ಮಾತನಾಡಿದ ಬಿಜೆಪಿ ನಾಯಕರು, ‘ಉತ್ತರ ಕರ್ನಾಟಕದ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಅಗ್ರಹಿಸಿದರು.
ಮೆಕ್ಕೆಜೋಳ ಮತ್ತು ಕಬ್ಬು ಬೆಳೆಗಾರರ ಕಳವಳಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ. ಮೆಕ್ಕೆಜೋಳ ರೈತರು ಖರೀದಿ ಕೇಂದ್ರಗಳನ್ನು ತೆರೆಯಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ಸರ್ಕಾರ ಇನ್ನೂ ಕಾರ್ಯಪ್ರವೃತ್ತವಾಗಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದರು.
ಕಾಲ್ ಮಾಡಿದಾಗಲೆಲ್ಲಾ ಆಕೆಯ ಫೋನ್ ಬ್ಯುಸಿ ಬರ್ತಿದೆ ಎಂದು ರೊಚ್ಚಿಗೆದ್ದಿದ್ದ ಪ್ರಿಯಕರ ಮಾಡಿದ್ದೇನು?
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ : ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ