Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮೈಸೂರು: ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ತಕ್ಷಣಕ್ಕೆ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಈ ಮರಿಗಳು ನಾಗರಹೊಳೆ ಉದ್ಯಾನದಂಚಿನ ತಾಲೂಕಿನ ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿದ್ದವು.
ಡಿ. 6ರಂದು ಒಂದು, 7ರಂದು ಎರಡು ಹಾಗೂ ಮಂಗಳವಾರ ಒಂದು ಹುಲಿ ಮರಿ ಮೃತಪಟ್ಟಿದೆ. ತಾಯಿ ಹುಲಿ ಆರೋಗ್ಯದಿಂದಿದೆ.
ಹುಲಿಮರಿಗಳ ಅಂಗಾಂಗಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ನ.28ರಂದು ಹನಗೋಡು ಹೋಬಳಿಯ ಗೌಡನಕಟ್ಟೆಯ ಪ್ರಕಾಶ್ ಅವರ ಜೋಳದ ಹೊಲದಲ್ಲಿ ನಾಲ್ಕು ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು. ಮಧ್ಯರಾತ್ರಿ ತಾಯಿ ಹುಲಿ ಸೆರೆಯಾಗಿತ್ತು. ಎರಡು ದಿನಗಳ ನಂತರ ನ.30ರಂದು ನಾಲ್ಕು ಹುಲಿಮರಿಗಳು ಪತ್ತೆಯಾಗಿ ಅವುಗಳನ್ನು ರಕ್ಷಿಸಿ ಕೂರ್ಗಳ್ಳಿ ಪುನರ್ವಸತಿ ಕೇಂದ್ರಲ್ಲಿದ್ದ ತಾಯಿ ಹುಲಿಯೊಂದಿಗೆ ಸೇರಿಸಲಾಗಿತ್ತು
ಸೆರೆಹಿಡಿಯುವ ವೇಳೆ ಜನರ ಕಿರುಚಾಟದಿಂದ ಹುಲಿಮರಿಗಳು ಗಾಬರಿಯಾಗಿದ್ದವು. ಎರಡು ದಿನ ತಾಯಿಯಿಂದ ದೂರವಾಗಿದ್ದ ಮರಿಗಳು ಆಹಾರವಿಲ್ಲದೆ ಬಳಲಿದ್ದವು. ಸೆರೆ ಹಿಡಿಯುವ ವೇಳೆಯೇ ನಿತ್ರಾಣಗೊಂಡಿದ್ದವು. ಸೂಕ್ತ ಚಿಕಿತ್ಸೆಗಾಗಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿತ್ತು.
ಸೆರೆ ಸಿಕ್ಕ ನಂತರ ತಾಯಿ ಹಾಗೂ ನಾಲ್ಕು ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ಅಸ್ವಸ್ಥಗೊಂಡಿದ್ದ ಇವು ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಮರಿಗಳ ಶವ ಪರೀಕ್ಷೆ ನಡೆಸಿದ್ದು, ಮರಿಗಳ ಅಂಗಾಂಗಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎ ಮಹಮ್ಮದ್ ಯಾಜುದ್ದೀನ್ ತಿಳಿಸಿದ್ದಾರೆ.
Weather report ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಚಳಿ, ಶೀತ ಅಲೆಯ ಎಚ್ಚರಿಕೆ
ನಾಳೆ ಡೆವಿಲ್ ಚಿತ್ರ ರಿಲೀಸ್ : ಜೈಲಿನಿಂದಲೇ ಅಭಿಮಾನಿಗಳಿಗೆ ಸಂದೇಶ ರವಾನಿಸಿದ ನಟ ದರ್ಶನ್.!