Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಕ್ಕಳಿಗೆ ಪಾಠ ಮಾಡಿ ಒಳ್ಳೆಯ ದಾರಿಯಲ್ಲಿ ಸಾಗುವಂತೆ ಮಾಡಬೇಕಿದ್ದ ಶಿಕ್ಷಕರೇ ತಪ್ಪು ದಾರಿಯಲ್ಲಿ ನಡೆದಾಗ ಅವರಿಗೆ ಶಿಕ್ಷಿಸುವವರು ಯಾರು? ಇಲ್ಲೊಬ್ಬ ಶಿಕ್ಷಕ ಕುಡಿದ ಮತ್ತಿನಲ್ಲಿ ಶಾಲೆಗೆ ಬಂದಿದ್ದಲ್ಲದೇ ನೃತ್ಯ ಮಾಡುತ್ತಾ ವಿಚಿತ್ರವಾಗಿ ವರ್ತಿಸಿದ್ದಾರೆ.
ಈ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಶೋಕಾಪುರ್ ಗವಟಿಲ್ ಜಿಲ್ಲೆಯ ಮಹೂರ್ ತಾಲ್ಲೂಕಿನಲ್ಲಿ ನಡೆದಿದೆ. ಜಿಲ್ಲಾ ಪರಿಷತ್ ಶಾಲೆಯ ಶಿಕ್ಷಕನೊಬ್ಬ ಕುಡಿದ ಮತ್ತಿನಲ್ಲಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಘಟನೆಯ ನಂತರ, ಪೋಷಕರು ಮತ್ತು ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಬಂಧಪಟ್ಟ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಶಾಲೆಯಂತಹ ಸೂಕ್ಷ್ಮ ಸ್ಥಳದಲ್ಲಿ ನಡೆಯುತ್ತಿರುವ ಇಂತಹ ಘಟನೆ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.