Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಗಳನ್ನು ಪ್ರೀತಿಸುತ್ತಿದ್ದ ಹುಡುಗನಿಗೆ ಕರೆ ಮಾಡಿ, ಬಾ ಮದುವೆ ವಿಚಾರ ಮಾತನ್ನಾಡೋಣ ಎಂದು ಕರೆಸಿಕೊಂಡು ಬ್ಯಾಟ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.
ಶ್ರವಣ್ಗೆ ಬೀರಮ್ಗುಡಾದ ನಿವಾಸಿ 19 ವರ್ಷದ ಶ್ರೀಜಾ ಎಂಬಕೆಯ ಮೇಲೆ ಲವ್ ಆಗಿತ್ತು. ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ಪ್ರೀತಿಸುತ್ತಿದ್ದರು. ಆದರೆ ಇವರಿಬ್ಬರ ಪ್ರೀತಿಗೆ ಶ್ರೀಜಾ ಕುಟುಂಬ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ ಅನೇಕ ಬಾರಿ, ಶ್ರವಣ್ಗೆ ಎಚ್ಚರಿಕೆ ಕೂಡ ನೀಡಿತ್ತು.
ಆದರೆ ಪ್ರೇಮಿಗಳು ತಮ್ಮ ಪ್ರೀತಿಯ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಒಂದು ದಿನ ಶ್ರೀಜಾ ಕುಟುಂಬಸ್ಥರು ಮದುವೆ ವಿಚಾರ ಮಾತನ್ನಾಡೋದು ಇದೆ. ಮನೆಗೆ ಬಾ ಎಂದು ಕರೆಸಿಕೊಂಡಿದ್ದಾರೆ. ಮನೆಗೆ ಬರುತ್ತಿದ್ದಂತೆಯೇ ಶ್ರೀಜಾಳ ತಾಯಿ ಆತನ ಮೇಲೆ ಅಟ್ಯಾಕ್ ಮಾಡಿದ್ದಾಳೆ. ಕ್ರಿಕೆಟ್ ಬ್ಯಾಟ್ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾಳೆ. ಇದರಿಂದ ಆತನ ತಲೆಗೆ ಗಂಭೀರ ಪೆಟ್ಟು ಬಿದ್ದಿದೆ. ಕಾಲು, ಕೈ ಸೇರಿದಂತೆ ಅನೇಕ ಕಡೆ ಗಾಯಗಳಾಗುತ್ತದೆ.
ನಂತರ ಆತನನ್ನು ಕುಕಟಪಳ್ಳಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ. ಅಮೀನ್ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.