Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ಇದೀಗ ಬಾಲಿವುಡ್ ಸಿನಿಮಾ ಧುರಂಧರ್ ಹವಾ ಜೋರಾಗಿದೆ. ಈ ಸಿನಿಮಾದ ರೀತಿಯಲ್ಲೇ ಅನೇಕ ರೀಲ್ಸ್ಗಳು ವೈರಲ್ ಆಗಿವೆ. ಇದೀಗ ಮಧ್ಯಪ್ರದೇಶ ಸರ್ಕಾರವು ಪ್ರಧಾನಿ ನರೇಂದ್ರ ಮೋದಿಯವರ ಧುರಂಧರ್ ಶೈಲಿಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ.
ಈ ವಿಡಿಯೋ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದುಕೊಂಡು ಹೋಗುವುದರೊಂದಿಗೆ ಪ್ರಾರಂಭವಾಗುತ್ತದೆ. ನಂತರ ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅವರೊಂದಿಗೆ ಶೇಕ್ ಹ್ಯಾಂಡ್, ಮಾತುಕತೆ ನಡೆಸುವುದನ್ನು ನೋಡಬಹುದು.
ಇದಾದ ನಂತರ ವಿಡಿಯೋದಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.
https://www.instagram.com/reel/DSCKIs-iYga/?igsh=cHZzdWZnaWxvd3pn