Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೋಲಾರ : ಲೈಂಗಿಕ ದೌರ್ಜನ್ಯಕ್ಕೆ ಬೇಸತ್ತು 13 ವರ್ಷದ ಬಾಲಕಿ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ-ಇಮೇಲ್ ಕಳುಹಿಸಿದ ಘಟನೆ ನಡೆದಿದೆ.
ಬೀದರ್ ಮತ್ತು ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ 5 ಆರ್ ಡಿಎಕ್ಸ್ ಬಾಂಬ್ ಇಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮೇಲ್ ಬಂದಿತ್ತು, ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನಂತರ ಪರಿಶೀಲನೆ ನಡೆಸಿದಾಗ ತಮಿಳುನಾಡು ಮೂಲದ 13 ವರ್ಷದ ಬಾಲಕಿ ಬಾಂಬ್ ಬೆದರಿಕೆ ಕಳುಹಿಸಿದ್ದಾಳೆ ಎಂದು ತಿಳಿದು ಬಂದಿದೆ. ಮೊದಲು ಮೇಲ್ ನಲ್ಲಿ ಬಾಂಬ್ ಬೆದರಿಕೆ ಇಮೇಲ್ ನಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಿ ನಂತರ ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪ್ರಸ್ತಾಪ ಮಾಡಿದ್ದಾಳೆ. ಈ ಬಗ್ಗೆ ಕೋಲಾರ, ಬೀದರ್ ಡಿಸಿ ಕಚೇರಿ ಅಧಿಕಾರಿಗಳು, ಪೊಲೀಸರು ಪರಿಶೀಲನೆ ನಡೆಸಿದಾಗ ಇದು ಹುಸಿ ಬಾಂಬ್ ಇಮೇಲ್ ಎಂದು ಧೃಡವಾಗಿದೆ. ಆದರೆ ಬಾಲಕಿ ಲೈಂಗಿಕ ದೌರ್ಜನ್ಯದ ಬಗ್ಗೆ ಪ್ರಸ್ತಾಪ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಚೆನ್ನೈನಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಇಮೇಲ್ ನಲ್ಲಿ ಪ್ರಸ್ತಾಪಿಸಿದ್ದಳು ಎನ್ನಲಾಗಿದೆ.