Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಿವ್ಯಾಂಗ ಯುವತಿ ಮೇಲೆ ಅತ್ಯಾಚಾರ: ಯಾರಿಗೂ ಹೇಳದಂತೆ ಬೆದರಿಕೆ!
ಕರ್ನಾಟಕ

ದಿವ್ಯಾಂಗ ಯುವತಿ ಮೇಲೆ ಅತ್ಯಾಚಾರ: ಯಾರಿಗೂ ಹೇಳದಂತೆ ಬೆದರಿಕೆ!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮಂಡ್ಯ: ದಿವ್ಯಾಂಗ ಯುವತಿಯ ಮೇಲೆ ಬಲತ್ಕಾರ ನಡೆಸಿ, ಬಳಿಕ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಕೆಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುರ ಗ್ರಾಮದ ನಿವಾಸಿ ರಮ್ಯಾ (26) ದೂರು ನೀಡಿದ ಯುವತಿಯಾಗಿದ್ದು, ಇವರು ದಿವ್ಯಾಂಗರಾಗಿದ್ದಾರೆ. ರಮ್ಯಾ ಮನೆಯಲ್ಲಿ ಒಬ್ಬರೇ ಇದ್ದಾಗ, ಪಕ್ಕದ ಮನೆಯ ಪೃಥ್ವಿ ಎಂಬಾತ ಈಕೆಯ ಮೇಲೆ ಬಲತ್ಕಾರ ಎಸಗಿದ್ದಾನೆ. ಆದರೆ ಈ ವಿಷಯವನ್ನು ಯಾರಿಗೂ ಹೇಳದಂತೆ ಆತ ಸಂತ್ರಸ್ತೆಗೆ ನಿರಂತರ ಬೆದರಿಕೆ ಹಾಕಿದ್ದಾನೆ. ಒಂದು ವೇಳೆ ಈ ವಿಚಾರ ಯಾರಿಗಾದರೂ ಹೇಳಿದರೆ, ರಮ್ಯಾ ಅವರ ಅಪ್ಪ, ಅಮ್ಮನನ್ನು ಕೊಲ್ಲುವುದಾಗಿ ಬೆದರಿಸಿದ್ದ ಎನ್ನಲಾಗಿದೆ.

ಕಳೆದ ಅಕ್ಟೋಬರ್ ತಿಂಗಳಲ್ಲಿ ರಮ್ಯಾ ಅವರಿಗೆ ವಾಂತಿ ಶುರುವಾಗಿದ್ದರಿಂದ, ವೈದ್ಯರ ಬಳಿ ತಪಾಸಣೆ ಮಾಡಿಸಿದ್ದಾರೆ. ವೈದ್ಯರ ಸಲಹೆಯಂತೆ ಸ್ಕ್ಯಾನಿಂಗ್ ಮಾಡಿಸಿದಾಗ ರಮ್ಯಾ ಅವರು ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಇದರ ಬೆನ್ನಲ್ಲೇ, ರಮ್ಯಾ ಅವರು ಪೃಥ್ವಿಯ ಕುಟುಂಬದವರೊಂದಿಗೆ ಮದುವೆ ಮಾಡುವಂತೆ ಮಾತುಕತೆ ನಡೆಸಿದ್ದರು. ಆರಂಭದಲ್ಲಿ ಮದುವೆಗೆ ಒಪ್ಪಿದ್ದ ಪೃಥ್ವಿ ಮತ್ತು ಆತನ ಮನೆಯವರು, ಇದೀಗ ಮದುವೆಯಾಗಲು ನಿರಾಕರಿಸಿ ಮೋಸ ಮಾಡಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾರೆ.
ರಮ್ಯಾ ತಮ್ಮ ಮೇಲೆ ನಡೆದ ದೌರ್ಜನ್ಯ ಹಾಗೂ ಮೋಸದ ಕುರಿತು ಕೆಆರ್‌ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಸದ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿ ಪೃಥ್ವಿ ವಿರುದ್ಧ ತನಿಖೆ ಕೈಗೊಂಡಿದ್ದಾರೆ.

Bluebird-6 Satellite ಡಿ.15ರಂದು ‘ಬ್ಲೂಬರ್ಡ್ -6 ಉಪಗ್ರಹ’ ಉಡಾವಣೆಗೆ ಇಸ್ರೋ ಸಿದ್ಧತೆ

TAGGED:Disabled woman raped: Threatened not to tell anyone!
Share This Article
Facebook Twitter Copy Link Print
Previous Article Bluebird-6 Satellite ಡಿ.15ರಂದು ‘ಬ್ಲೂಬರ್ಡ್ -6 ಉಪಗ್ರಹ’ ಉಡಾವಣೆಗೆ ಇಸ್ರೋ ಸಿದ್ಧತೆ
Next Article 23 ಸಿಕ್ಸ್. ಟಿ20 ಪಂದ್ಯದಲ್ಲಿ ದ್ವಿಶತಕ ಸಿಡಿಸಿದ ಎಡ್ವರ್ಡ್ಸ್

Popular Posts

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

You Might Also Like

ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?