Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಶಿವಮೊಗ್ಗ : ಪ್ರೇಮಿಗಳಿಗೆ ಸಹಕರಿಸಿದ ಇಬ್ಬರನ್ನ ಯುವತಿಯ ಸಹೋದರ ಹಾಗೂ ಹಾಗೂ ಆತನ ಸ್ನೇಹಿತರು ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜೈ ಭೀಮ್ ಬಡಾವಣೆಯಲ್ಲಿ ನಡೆದಿದೆ.
ಹತ್ಯೆಯಾದ ಯುವಕರನ್ನ ಕಿರಣ್ (25) ಮಂಜುನಾಥ್ (45) ಎಂದು ಗುರುತಿಸಲಾಗಿದೆ. ಮನೆ ಬಿಟ್ಟು ಬಂದ ಪ್ರೇಮಿಗಳು ಶುಕ್ರವಾರ ಸಂಜೆ ಹಳೆ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಹುಡುಗನ ಸ್ನೇಹಿತರ ಮೇಲೆ ಯುವತಿಯ ಸಹೋದರ ಹಾಗೂ ಆತನ ಸ್ನೇಹಿತರು ದಾಳಿ ಮಾಡಿದ್ದಾರೆ.
ಚಾಕುವಿನಿಂದ ಇರಿದು ಇಬ್ಬರನ್ನ ಹತ್ಯೆ ಮಾಡಿದ್ದಾರೆ. ಓಡಿ ಹೋದ ಹುಡುಗ-ಹುಡುಗಿಗೆ ಇಬ್ಬರು ಬೆಂಬಲ ನೀಡಿದ್ದಾರೆಂದು ದಾಳಿ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.