Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್‌ ಪ್ರಯಾಣ ಉಚಿತ ಕೊಡಲು ನಿಮಗೆ ಕೇಳಿದ್ದವರು ಯಾರು? -ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ
ಕರ್ನಾಟಕಪ್ರಮುಖ

ಬಸ್‌ ಪ್ರಯಾಣ ಉಚಿತ ಕೊಡಲು ನಿಮಗೆ ಕೇಳಿದ್ದವರು ಯಾರು? -ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬಸ್‌ ಪ್ರಯಾಣ ಉಚಿತ ಕೊಡಲು ನಿಮಗೆ ಕೇಳಿದ್ದವರು ಯಾರು? ಸರ್ಕಾರಿ ನೌಕರರಿಗೆ ಸಂಬಳ ಕೊಡಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲದಂತಾಗಿದೆಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯನ್ನು ಮೌಖಿಕವಾಗಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

 

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನೌಷಧ ಕೇಂದ್ರಗಳನ್ನು ತೆರವುಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣದ ವಿಚಾರಣೆಯ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಆರ್ಥಿಕ ನಿರ್ವಹಣೆಯ ಕುರಿತು ಮೌಖಿಕವಾಗಿ ಚಾಟಿ ಬೀಸಿದೆ.

ಅಡ್ವೊಕೇಟ್‌ ಜನರಲ್‌ ಜೆ.ಎಂ.ಗಂಗಾಧರ ಅವರು, ‘ರಾಜ್ಯ ಸರ್ಕಾರದ ನೀತಿಗಳು ಜನಪರವಾಗಿಯೇ ಇವೆ. ಜನೌಷಧಿ ಕೇಂದ್ರಗಳು ಸಬ್ಸಿಡಿ ದರದಲ್ಲಿ ಔಷಧಿ ವಿತರಿಸಿದರೆ ರಾಜ್ಯ ಸರ್ಕಾರ ಸಂಪೂರ್ಣ ಪುಕ್ಕಟೆಯಾಗಿ ಔಷಧಿಗಳನ್ನು ಪೂರೈಸುತ್ತಿದೆ’ ಎಂದು ಸರ್ಕಾರದ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದರು.

ಇದನ್ನು ಆಕ್ಷೇಪಿಸಿದ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅನಿರುದ್ಧ ಎ.ಕುಲಕರ್ಣಿ, ಸರ್ಕಾರದ ನೀತಿ ಹೇಗೆ ಜನವಿರೋಧಿ ನಿಲುವಿನಿಂದ ಕೂಡಿದೆ ಎಂದು ವಿವರಿಸಿದರು.

ಒಂದು ಹಂತದಲ್ಲಿ ಸರ್ಕಾರದ ಸಮರ್ಥನೆಯನ್ನು ತಳ್ಳಿಹಾಕಿದ ನ್ಯಾಯಪೀಠ, ‘ಕೇಂದ್ರ ಸರ್ಕಾರವೂ ಜನರ ಕಲ್ಯಾಣಕ್ಕಾಗಿಯೇ ಅಲ್ಲವೇ ಜನೌಷಧಿ ಯೋಜನೆ ಜಾರಿಗೆ ತಂದಿರುವುದು?, ಜನೌಷಧಿ ಕೇಂದ್ರಗಳನ್ನು ತೆರವುಗೊಳಿಸಬೇಕು ಎಂದು ಯಾರಾದರೂ ನಿಮಗೆ ದೂರು ಕೊಟ್ಟಿದ್ದರಾ? ಇಲ್ಲವಲ್ಲಾ? ಹಾಗೆಯೇ, ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಡಿ ಎಂದು ಯಾರಾದರೂ ಕೇಳಿದ್ದರಾ? ಇಲ್ಲವಲ್ಲಾ?… ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

 

TAGGED:#congress #Karnataka #state #government #highcourt #daravada
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಭಾರಿ ಚಳಿ – ಈ ಜಿಲ್ಲೆಗಳಿಗೆ ಶೀತ ಗಾಳಿ ಅಲರ್ಟ್
Next Article ಪೊಲೀಸಪ್ಪನ ಜತೆ ರೀಲ್ಸ್ ಆಂಟಿ ಜೂಟ್ : ಅಕ್ರಮ ಸಂಬಂಧ ಕೇಸ್‌ಗೆ ಟ್ವಿಸ್ಟ್

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?