Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಶಾಲೆಯಲ್ಲೇ ಮದ್ಯಪಾನ ಮಾಡಿರುವ 6 ವಿದ್ಯಾರ್ಥಿನಿಯರನ್ನು ಅಮಾನತು ಮಾಡಿರುವ ಘಟನೆ ತಮಿಳುನಾಡಿನ ತಿರುನಲ್ವೇಲಿಯಲ್ಲಿ ನಡೆದಿದೆ
ತಿರುನಲ್ವೇಲಿಯ ಪಾಳಯಂಕೋಟೈನಲ್ಲಿರುವ ಸರ್ಕಾರಿ ಅನುದಾನಿತ ಶಾಲೆ 9ನೇ ತರಗತಿಯಲ್ಲಿ ಈ ಘಟನೆ ನಡೆದಿದೆ. ಈ ಬಳಿಕ ಸರ್ಕಾರ ತನಿಖೆ ಆರಂಭಿಸಿದೆ.
ಈ ಘಟನೆಯ ದೃಶ್ಯಗಳು ವಿದ್ಯಾರ್ಥಿ ವಲಯದಲ್ಲಿ ಹದಗೆಡುತ್ತಿರುವ ಶಿಸ್ತು ಮತ್ತು ಮೌಲ್ಯಗಳಿಗೆ ಕನ್ನಡಿ ಹಿಡಿದಂತಿವೆ. ತರಗತಿಗಳ ನಡುವಿನ ವಿರಾಮದ ಸಮಯದಲ್ಲಿ ವಿದ್ಯಾರ್ಥಿನಿಯರು ಪ್ಲಾಸ್ಟಿಕ್ ಕಪ್‌ಗಳಲ್ಲಿ ಮದ್ಯವನ್ನು ಸುರಿದು ಕುಡಿಯುತ್ತಿರುವುದು ಮತ್ತೊಬ್ಬ ವಿದ್ಯಾರ್ಥಿನಿಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ತಕ್ಷಣ ಸರ್ಕಾರ ಮತ್ತು ಶಿಕ್ಷಣ ಇಲಾಖೆ ತನಿಖೆ ಆರಂಭಿಸಿದೆ. ಪ್ರಾಥಮಿಕ ತನಿಖೆಯ ನಂತರ, ವಿಡಿಯೋದಲ್ಲಿ ಕಂಡುಬಂದ ಆರು ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ ತಕ್ಷಣವೇ ಅಮಾನತು ಮಾಡಿದೆ. ಆದಾಗ್ಯೂ, ಮಾನವೀಯ ನೆಲೆಯಲ್ಲಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಶಾಲಾ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಅಲ್ಲದೆ, ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸೂಕ್ತ ಕೌನ್ಸೆಲಿಂಗ್ ನೀಡಲು ನಿರ್ಧರಿಸಲಾಗಿದೆ.
ಹಸೆಮಣೆ ಏರುವ ಮುನ್ನ ಮಾಜಿ ಪ್ರೇಮಿ ಭೇಟಿಯಾದ ವಧು; ಆಮೇಲೆ ಆಗಿದ್ದೇನು?; ವೈರಲ್ ವಿಡಿಯೋ ನೋಡಿ