Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sydney attack ಸಿಡ್ನಿ ದಾಳಿ ಹಿಂದೆ ಪಾಕ್ ಕೈವಾಡ ಶಂಕೆ: ಮೃತರ ಸಂಖ್ಯೆ 16ಕ್ಕೇರಿಕೆ
ಪ್ರಮುಖವಿದೇಶ

Sydney attack ಸಿಡ್ನಿ ದಾಳಿ ಹಿಂದೆ ಪಾಕ್ ಕೈವಾಡ ಶಂಕೆ: ಮೃತರ ಸಂಖ್ಯೆ 16ಕ್ಕೇರಿಕೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಆಸ್ಪ್ರೇಲಿಯಾದ ಬಾಂಡಿ ಬೀಚ್‌ನಲ್ಲಿ ಹನುಕ್ಕಾ ಹಬ್ಬದ ಸಂಭ್ರಮದಲ್ಲಿದ್ದ ಯಹೂದಿಗಳನ್ನು ಗುರಿಯಾಗಿಸಿಕೊಂಡು, ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದೆ.

ಈ ದಾಳಿ ಹಿಂದೆ ಪಾಕಿಸ್ತಾನದ ಕೈವಾಡವಿರುವ ಬಗ್ಗೆ ನ್ಯೂ ಸೌಥ್ಸ್‌ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಸಾಜಿದ್‌ ಅಕ್ರಮ್‌ ಮತ್ತು ನವೀದ್‌ ಅಕ್ರಮ್‌ ಪಾಕಿಸ್ತಾನ ಮೂಲದವರು ಎನ್ನಲಾಗಿದೆ.
ಕಳೆದ 30 ವರ್ಷಗಳಲ್ಲಿ ಆಸ್ಟ್ರೇಲಿಯಾದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಎಂಟು ದಿನಗಳ ಕಾಲ ನಡೆಯುವ ಹನುಕ್ಕಾ ಬೈ ದಿ ಸೀ ಹಬ್ಬ ಭಾನುವಾರ ಆರಂಭವಾಗಿತ್ತು. ಉತ್ಸವದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಸಂಭ್ರಮದಿಂದ ನಡೆಯುತ್ತಿದ್ದ ಹಬ್ಬದ ನಡುವೆ ಕೇಳಿ ಬಂದ ಗುಂಡಿನ ಸದ್ದು ಜನರನ್ನು ನಡುಗಿಸಿತು. ಕಪ್ಪು ಬಟ್ಟೆ ಧರಿಸಿ ಬಂದಿದ್ದ ಇಬ್ಬರು ಜನರ ಮೇಲೆ ಮನಬಂದಂತೆ ಗುಂಡು ಹಾರಿಸುತ್ತಿದ್ದರು. ಈ ದೃಶ್ಯ ಕಂಡ ಜನ ಹೌಹಾರಿದರು. ದಿಕ್ಕಾಪಾಲಾಗಿ ಓಡಲು ಶುರು ಮಾಡಿದರು. ತಮ್ಮ ಪ್ರಾಣ ಉಳಿಸಿಕೊಳ್ಳಲು ಸುರಕ್ಷಿತ ಸ್ಥಳಗಳತ್ತ ಕಾಲ್ಕಿತ್ತರು. ಹೀಗಿದ್ದರೂ ಕೆಲವರು ಹಂತಕರ ಗುಂಡೇಟಿಗೆ ಬಲಿಯಾದರು. ಮೃತರಲ್ಲಿ 10 ವರ್ಷದ ಮಗು ಮತ್ತು 87 ವರ್ಷದ ವೃದ್ಧ ಕೂಡ ಸೇರಿದ್ದಾರೆ ಎನ್ನಲಾಗಿದೆ.
ಅಮಾಯಕರ ಮೇಲೆ ದಾಳಿ ನಡೆಸಿದ ಹಂತಕರು ಯಾರೆಂದು ನ್ಯೂಸೌಥ್‌ ವೇಲ್ಸ್‌ ಪೊಲೀಸರು ಹಾಗೂ ಭದ್ರತಾ ಪಡೆಗಳು ಪತ್ತೆ ಹಚ್ಚಿವೆ. ದಾಳಿ ನಡೆಸಿದ ಇಬ್ಬರು ಬಂದೂಕುಧಾರಿಗಳನ್ನು ತಂದೆ ಮತ್ತು ಮಗ ಎಂದು ಗುರುತಿಸಲಾಗಿದೆ. ನಾಗರಿಕರ ಪ್ರತಿದಾಳಿಯಲ್ಲಿ ತಂದೆ ಹತನಾಗಿದ್ದಾನೆ. ಇಬ್ಬರೂ ಸೌಥ್‌ ವೇಲ್ಸ್ ನಗರ ವಾಸಿಗಳು ಎನ್ನಲಾಗಿದೆ.
50 ವರ್ಷದ ಸಾಜಿದ್‌ ಅಕ್ರಮ್ ಹಣ್ಣಿನ ಅಂಗಡಿಯೊಂದರ ಮಾಲೀಕನಾಗಿದ್ದ. ಈತ ಪೊಲೀಸರ ಗುಂಡೇಟಿಗೆ ಸ್ಥಳದಲ್ಲೇ ಮೃತಪಟ್ಟ. ಇನ್ನು ಈತನ ಮಗ ನವೀದ್‌ ಅಕ್ರಮ್. ಈತನನ್ನು ಘಟನಾ ಸ್ಥಳದಲ್ಲೇ ಬಂಧಿಸಲಾಗಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಇಬ್ಬರನ್ನು ಹೊರತುಪಡಿಸಿ, ದಾಳಿಯಲ್ಲಿ ಬೇರೆ ಯಾರೂ ಭಾಗಿಯಾಗಿಲ್ಲ. ಮೇಲ್ನೋಟಕ್ಕೆ ಯಹೂದಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎನ್ನುವುದು ಬೆಳಕಿಗೆ ಬಂದಿದ್ದು, ನಿಖರ ಕಾರಣವನ್ನು ಹಂತಕನಿಂದ ಪಡೆಯಬೇಕಿದೆ ಎಂದು ನ್ಯೂ ಸೌಥ್ಸ್‌ ಪೊಲೀಸರು ತಿಳಿಸಿದ್ದಾರೆ.

ಮೀನುಗಾರಿಕೆಯ‌ ನೆಪ:
ಹಂತಕರು ದಾಳಿ ನಡೆಸುವ ಮೊದಲು ತಮ್ಮ ಕುಟುಂಬ ಸದಸ್ಯರಿಗೆ ವಾರಾಂತ್ಯದ ಮೀನುಗಾರಿಕೆಗಾಗಿ ಜರ್ವಿಸ್ ಬೇಗೆ ಹೋಗುತ್ತಿರುವುದಾಗಿ ಸುಳ್ಳು ಹೇಳಿದ್ದರು. ಆರೋಪಿಗಳ ಬಳಿ ಬಂದೂಕು ಪರವಾನಗಿ ಇತ್ತೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ನ್ಯೂ ಸೌಥ್‌ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಆರೋಪಿಗಳ ವಾಹನದಲ್ಲಿ ಸುಧಾರಿತ ಸ್ಫೋಟಕ ಸಾಧನಗಳು ಪತ್ತೆಯಾಗಿವೆ. ಇವರು ಉನ್ನತ ಸಾಮರ್ಥ್ಯದ ಶಸ್ತ್ರಾಸ್ತ್ರಗಳನ್ನು ಹೇಗೆ ಪಡೆದರು ಮತ್ತು ಇವರಿಗೆ ಇನ್ಯಾರಾದರೂ ಸಹಕರಿಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಇಂಗ್ಲೆಂಡ್​​​ನ ಯುವಕನನ್ನು ಪ್ರೀತಿಸಿ ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದ ಬೇಲೂರಿನ ಯುವತಿ

TAGGED:Pakistan suspected behind Sydney attack: Death toll rises to 16
Share This Article
Facebook Twitter Copy Link Print
Previous Article ಇಂಗ್ಲೆಂಡ್​​​ನ ಯುವಕನನ್ನು ಪ್ರೀತಿಸಿ ಶಾಸ್ತ್ರೋಕ್ತವಾಗಿ ಹಸೆಮಣೆ ಏರಿದ ಬೇಲೂರಿನ ಯುವತಿ
Next Article ಓಡಾಡುವ ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ವಿಚಿತ್ರ ಸೈಕೋ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?