Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೂಡಿಕೆ ಮಾಡಿ, ಲಾಭ ಬಂದ ಹಣದಿಂದ ದಾನ-ಧರ್ಮ ಮಾಡಬಹುದೆಂದು ಭಾವಿಸಿದ್ದ ಉದ್ಯಮಿಗೆ ಶಾಕ್
ದೇಶ

ಹೂಡಿಕೆ ಮಾಡಿ, ಲಾಭ ಬಂದ ಹಣದಿಂದ ದಾನ-ಧರ್ಮ ಮಾಡಬಹುದೆಂದು ಭಾವಿಸಿದ್ದ ಉದ್ಯಮಿಗೆ ಶಾಕ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಷೇರು ಮಾರ್ಕೆಟ್  ಹೆಸರಲ್ಲಿ ಆನ್​​ಲೈನ್​ ದಂಧೆಕೋರರು ಕೋಟ್ಯಂತರ ರೂ ವಂಚಿಸಿರುವಂತಹ ಘಟನೆ ನಡೆದಿದೆ.ಬೆಂಗಳೂರಿನ ಹಿರಿಯ ಉದ್ಯಮಿ, ರಾಮ ಭಕ್ತರಾದ ರಾಜೇಂದ್ರ ನಾಯ್ಡು ಅವರನ್ನು ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವಂಚಿಸಿರುವ ಸೈಬರ್ ಖದೀಮರು, 8.3 ಕೋಟಿ ರೂ. ಎಗರಿಸಿದ್ದಾರೆ.

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಬಂದ ಲಾಭದ ಹಣವನ್ನು ದಾನ ಕಾರ್ಯಗಳಿಗೆ ಬಳಸಬಹುದು ಎಂಬ ಉದ್ದೇಶದಿಂದ ರಾಜೇಂದ್ರ ನಾಯ್ಡು ಹೂಡಿಕೆಗೆ ಮುಂದಾಗಿದ್ದರು. ರಿಲಯನ್ಸ್ ಕಂಪನಿಯ ಹೆಸರನ್ನು ಬಳಸಿ ನಂಬಿಕೆ ಮೂಡಿಸಿದ ವಂಚಕರು, RARCLLPRO ಎಂಬ ಮೊಬೈಲ್ ಆ್ಯಪ್ ಇನ್​​ಸ್ಟಾಲ್ ಮಾಡುವಂತೆ ಸೂಚಿಸಿದ್ದರು. ಆ್ಯಪ್ ಮೂಲಕ ಹೂಡಿಕೆ ವಿವರಗಳು ತೋರಿಸುತ್ತಿದ್ದುದರಿಂದ ನಂಬಿದ ನಾಯ್ಡು ಮೊದಲಿಗೆ 25 ಲಕ್ಷ ರೂಪಾಯಿ RTGS ಮೂಲಕ ವರ್ಗಾಯಿಸಿದ್ದರು.

ಆ್ಯಪ್‌ನಲ್ಲಿ ಹೂಡಿಕೆ ಯಶಸ್ವಿಯಾಗಿದೆ ಎಂಬುದು ತೋರಿದ ಬಳಿಕ ಹಂತ ಹಂತವಾಗಿ ಒಟ್ಟು 8.3 ಕೋಟಿ ರೂಪಾಯಿಯನ್ನು ಹೂಡಿಕೆ ಮಾಡಿದ್ದಾರೆ. ಆ್ಯಪ್‌ನಲ್ಲಿ ಈ ಮೊತ್ತಕ್ಕೆ 59.4 ಕೋಟಿ ರೂಪಾಯಿ ಲಾಭಾಂಶ ಬಂದಿದೆ ಎಂದು ತೋರಿಸಲಾಗಿತ್ತು. ಇದರಲ್ಲಿ 15 ಕೋಟಿ ರೂಪಾಯಿ ವಿತ್‌ಡ್ರಾ ಮಾಡಲು ಪ್ರಯತ್ನಿಸಿದಾಗ ಸಾಧ್ಯವಾಗಿರಲಿಲ್ಲ. ಇದರಿಂದ ನಾಯ್ಡು ಅವರಿಗೆ ವಂಚನೆಯ ಅನುಮಾನ ಬಂದಿದೆ.

ಹಣ ವಿತ್​ಡ್ರಾ ಮಾಡಲು ಸಾಧ್ಯವಾಗದ ಬಗ್ಗೆ ಪ್ರಶ್ನಿಸಿದಾಗ ವಂಚಕರು, ಅದಕ್ಕೆ ಶೇಕಡಾ 18 ರಷ್ಟು ಸೇವಾ ಶುಲ್ಕವಾಗಿ 2.70 ಕೋಟಿ ರೂಪಾಯಿ ಪಾವತಿಸಬೇಕು ಎಂದು ಬೇಡಿಕೆ ಇಟ್ಟರು. ಇದರಿಂದ ಅನುಮಾನಗೊಂಡ ರಾಜೇಂದ್ರ ನಾಯ್ಡು ತಕ್ಷಣ 1930 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಿದರು.

 

Share This Article
Facebook Twitter Copy Link Print
Previous Article ಗೋಲ್ಗಪ್ಪಾ ಸವಿದು ನೃತ್ಯ ಮಾಡುವ ಮೂಲಕ ಮುದ್ದಾಗಿ ರಿಯಾಕ್ಷನ್ ಕೊಟ್ಟ ವಿದೇಶಿ ಮಹಿಳೆ – ವೈರಲ್ ವಿಡಿಯೋ ನೋಡಿ
Next Article ಬಿಯರ್ ಕುಡಿಯಲು ಸರಿಯಾದ ಸಮಯ ಯಾವುದು?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?