Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಮೆ ಹಣಕ್ಕಾಗಿ ತನ್ನ ಕಾರಿನಲ್ಲಿ ಬೇರೆಯವನಿಗೆ ಬೆಂಕಿ ಹಚ್ಚಿ ಸಾವಿನ ಕತೆ ಕಟ್ಟಿದ್ದ ವ್ಯಕ್ತಿ
ದೇಶ

ವಿಮೆ ಹಣಕ್ಕಾಗಿ ತನ್ನ ಕಾರಿನಲ್ಲಿ ಬೇರೆಯವನಿಗೆ ಬೆಂಕಿ ಹಚ್ಚಿ ಸಾವಿನ ಕತೆ ಕಟ್ಟಿದ್ದ ವ್ಯಕ್ತಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಮಹಾರಾಷ್ಟ್ರದಲ್ಲಿ ಕೆಲವು ದಿನಗಳ ಹಿಂದೆ ಕಾರೊಂದರಲ್ಲಿ ಸುಟ್ಟು ಕರಕಲಾದ ವ್ಯಕ್ತಿಯ ಶವ ಪತ್ತೆಯಾಗಿತ್ತು. ಕಾರಿನ ಚಾಲಕರ ಸೀಟಿನಲ್ಲಿದ್ದ ವ್ಯಕ್ತಿಯೇ ಸಾವನ್ನಪ್ಪಿದ್ದರಿಂದ ಆ ಕಾರಿನ ಮಾಲೀಕರೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾವಿಸಿದ್ದರು. ಆದರೆ, ಈ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದೆ.

ಹೌದು, ಲಾತೂರ್ ಜಿಲ್ಲೆಯ ವ್ಯಕ್ತಿಯೊಬ್ಬ ತಾನು ಸಾವನ್ನಪ್ಪಿದ್ದಾನೆಂದು ನಂಬಿಸಲು ತನ್ನದೇ ಪ್ರಾಯದ ಮತ್ತೊಬ್ಬ ವ್ಯಕ್ತಿಯ ಶವವನ್ನು ಕಾರಿನಲ್ಲಿರಿಸಿ, ಆ ಶವದ ಮುಖದ ಗುರುತು ಸಿಗಬಾರದು ಎಂದು ಬೆಂಕಿ ಹಚ್ಚಿದ್ದ. ಆ ಶವ ಪೂರ್ತಿಯಾಗಿ ಸುಟ್ಟು ಕರಕಲಾಗಿತ್ತು.

ಆ ಕಾರಿನಲ್ಲಿದ್ದ ವಸ್ತುಗಳನ್ನು ನೋಡಿದ ಪೊಲೀಸರು ಆ ಕಾರಿನ ಮಾಲೀಕರದ್ದೇ ಶವವೆಂದು ಭಾವಿಸಿದ್ದರು. ಎಲ್ಲವೂ ಆ ವ್ಯಕ್ತಿ ಪ್ಲಾನ್ ಮಾಡಿದಂತೆಯೇ ನಡೆದಿತ್ತು. ಆದರೆ, ನಿನ್ನೆ ಸಂಜೆ ಆತ ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ್ದ. ಈ ಒಂದು ಮೆಸೇಜಿನಿಂದ ಆತನ ಪ್ಲಾನ್ ಪೂರ್ತಿ ಹಾಳಾಗಿದೆ. ತಾನು ತೋಡಿದ ಹಳ್ಳಕ್ಕೆ ತಾನೇ ಬಿದ್ದಿದ್ದಾನೆ.

1 ಕೋಟಿ ರೂ. ಇನ್ಷುರೆನ್ಸ್ ಹಣಕ್ಕಾಗಿ ಆತ ತಾನು ಸಾವನ್ನಪ್ಪಿರುವುದಾಗಿ ನಂಬಿಸಲು ಈ ರೀತಿ ಪ್ಲಾನ್ ಮಾಡಿದ್ದ. ಆತ ತನ್ನದೇ ವಯಸ್ಸಿನ ವ್ಯಕ್ತಿಯೊಬ್ಬನನ್ನು ಕೊಂದು, ಆತನ ಶವವನ್ನು ತನ್ನ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿರಿಸಿ ಬೆಂಕಿ ಹಚ್ಚಿದ್ದ. ಅಲ್ಲಿ ತನ್ನ ವಾಚ್, ಶೂ ಮುಂತಾದ ವಸ್ತುಗಳನ್ನೂ ಇಟ್ಟಿದ್ದ.

ಇದರಿಂದ ಪೊಲೀಸರಿಗೆ ಆತನೇ ಸತ್ತಿದ್ದಾನೆಂದು ಅನುಮಾನ ಮೂಡಿತ್ತು. ಈ ಆರೋಪಿಯನ್ನು ಗಣೇಶ್ ಗೋಪಿನಾಥ್ ಚೌಹಾಣ್ ಎಂದು ಹೇಳಲಾಗಿದೆ. ಆತ ವಿಪರೀತ ಸಾಲ ಮಾಡಿಕೊಂಡಿದ್ದ. ಆ ಸಾಲ ತೀರಿಸಲು ವಿಮೆ ಹಣ ಪಡೆಯಲು ಈ ಸಾವಿನ ಪ್ಲಾನ್ ಮಾಡಿದ್ದ ಎಂದು ತಿಳಿದು ಬಂದಿದೆ.

Share This Article
Facebook Twitter Copy Link Print
Previous Article ರೋಲಿಂಗ್ ಪೇಪರ್‌, ಸ್ಮೋಕಿಂಗ್ ಕೋನ್‌ ನಿಷೇಧ – ಗುಜರಾತ್ ಸರ್ಕಾರ ಆದೇಶ
Next Article ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?