Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಕೊಪ್ಪಳ : ಬೈಕ್ ಗೆ ಬೊಲೆರೊ ವಾಹನ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮದ ಬಳಿ ನಡೆದಿದೆ.
ಮೃತರನ್ನ ವಾಜಿದ್ (17) ರಾಜಾಹುಸೇಬ್ (17) ಆಸೀಫ್ (18) ಎಂದು ಗುರುತಿಸಲಾಗಿದೆ. ಮೃತ ವಾಜಿದ್ ಮತ್ತು ಹುಸೇನ್ ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಆಸೀಫ್ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಎಂದು ಗುರುತಿಸಲಾಗಿದೆ.
ಘಟನೆ ಬಳಿಕ ಬೊಲೆರೊ ವಾಹನ ಚಾಲಕ ಎಸ್ಕೇಪ್ ಆಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.