Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಕುಟುಂಬದ ಮೇಲೆ ಹಲವಾರು ಕೇಸ್ ಗಳು ಇವೆ. ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಈಗಾಗಲೇ ಅನೇಕ ಪ್ರಕರಣಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಅವರಿಗೆ ಇನ್ನೊಂದು ಸಂಕಷ್ಟ ಎದುರಾಗಿದೆ.
ಇಂದು ಶಿಲ್ಪಾ ಶೆಟ್ಟಿ ಮುಂಬೈ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅದಕ್ಕೂ ಒಂದು ದಿನ ಮುನ್ನ, ಅಂದರೆ ಡಿ.17ರಂದು ಬೆಂಗಳೂರಿನಲ್ಲಿ ಕೂಡ ಶಿಲ್ಪಾ ಶೆಟ್ಟಿ ಅವರಿಗೆ ಸಂಬಂಧಿಸಿದ ಜಾಗಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಅವರು ‘ಬಾಸ್ಟಿಯನ್ ಗಾರ್ಡನ್ ಸಿಟಿ’ ಪಬ್ ಹೊಂದಿದ್ದಾರೆ. ಇದು ಬೆಂಗಳೂರಿನ ಅತಿ ದುಬಾರಿ ಪಬ್ಗಳಲ್ಲಿ ಒಂದಾಗಿದೆ. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ಈ ಪಬ್ ಇದೆ. ಪಬ್ ಮಾತ್ರವಲ್ಲದೇ ಇನ್ನೂ ಹಲವು ಕಡೆಗಳಲ್ಲಿ ದಾಳಿ ಮಾಡಿ ಕೆಲವು ದಾಖಲೆಗಳನ್ನು ಪರಿಶೀಲಿಸಲಾಗಿದೆ. ಇದರಿಂದಾಗಿ ಶಿಲ್ಪಾ ಶೆಟ್ಟಿ ಅವರಿಗೆ ಸಂಕಷ್ಟ ಶುರುವಾಗಿದೆ.
ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ಮೇಲೆ 60 ಕೋಟಿ ರೂಪಾಯಿ ವಂಚನೆ ಆರೋಪ ಕೇಳಿಬಂದಿದೆ. ಮುಂಬೈ ಮೂಲದ ಉದ್ಯಮಿ ದೀಪಕ್ ಕೊಠಾರಿ ಅವರು ಈ ಆರೋಪ ಮಾಡಿದ್ದಾರೆ. ಸ್ಟಾರ್ ದಂಪತಿಯಿಂದ ತಮಗೆ ವಂಚನೆ ಆಗಿದೆ ಎಂದು ದೀಪಕ್ ಕೊಠಾರಿ ದೂರು ನೀಡಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ 3,600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ; ಪರಮೇಶ್ವರ್