Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಇನ್ಮುಂದೆ ಪಾರಿವಾಳಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಊಟ ಹಾಕುವಂತಿಲ್ಲ.ಒಂದು ವೇಳೆ ಪಾರಿವಾಳ ಇಷ್ಟ ಅಂತ ಕಾಳು ಹಾಕಿದ್ರೆ ದಂಡಕ್ಕೆ ಗುರಿಯಾಗಬಹುದು.
ಬೆಂಗಳೂರು ನಗರದಲ್ಲಿ ಪಾರಿವಾಳಗಳಿಗೆ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಹಾಕುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ಆರೋಗ್ಯ ಇಲಾಖೆ ಮುಂದಾಗಿದೆ. ನಿಗದಿತ ಸ್ಥಳಗಳನ್ನು ಬಿಟ್ಟು ಕಂಡ ಕಂಡಲ್ಲಿ ಪಾರಿವಾಳಕ್ಕೆ ಕಾಳು ಹಾಕಿದರೆ ಇನ್ನುಮುಂದೆ ಜೈಲು ಶಿಕ್ಷೆ ಗ್ಯಾರಂಟಿ ಎಂದು ಎಚ್ಚರಿಕೆ ನೀಡಲಾಗಿದೆ. ಆರೋಗ್ಯ ಇಲಾಖೆಯ ಡೆಪ್ಯೂಟಿ ಕಮಿಷನರ್ ವಿ. ಲಕ್ಷ್ಮಿನಾಥ್ ಅವರು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು, ಗ್ರೇಟರ್ ಬೆಂಗಳೂರು ಏರಿಯಾ (ಜಿಬಿಎ) ವ್ಯಾಪ್ತಿಯಲ್ಲಿ ಮಾರ್ಗಸೂಚಿ ಜಾರಿಗೆ ತರಲು ಸೂಚಿಸಿದ್ದಾರೆ.
ಯಾಕಂದ್ರೆ, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಕೊಡುತ್ತಿರುವುದರಿಂದ ಹಿಕ್ಕೆಗಳು ಹಾಗೂ ಅದರ ದುರ್ವಾಸನೆ ಜನಸಾಮಾನ್ಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎನ್ನಲಾಗಿದೆ. ಹೀಗಾಗಿ ಈ ಕಟ್ಟುನಿಟ್ಟಿನ ರೂಲ್ಸ್ ಜಾರಿಗೆ ತರಲು ನಗರಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಫೀಡಿಂಗ್ ಮಾಡ್ತಿರೋದ್ರಿಂದ, ಪಾರಿವಾಳ ಹಿಕ್ಕೆಗಳು, ಹಾಗೂ ಅದರ ದುರ್ವಾಸನೆ ಜನಸಾಮಾನ್ಯರ ಆರೋಗ್ಯದ ಮೇಲೆ ಪರಿಣಾಮ ಬೀರ್ತಿದೆ ಎನ್ನಲಾಗಿದೆ. ಹಾಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆರೋಗ್ಯ ಇಲಾಖೆ ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದೆ.