Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಕುಸಿತ ಕಾಣುತ್ತಿದ್ದು, ಶೀತ ಗಾಳಿ ಬೀಸಿ ಚಳಿ ಹೆಚ್ಚಳವಾಗತ್ತಿದೆ.ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ತಾಪಮಾನ ಕುಸಿಯುತ್ತಿದ್ದು, ಹವಾಮಾನ ಇಲಾಖೆಯು ಜನರಿಗೆ ಮತ್ತು ಪ್ರಯಾಣಿಕರಿಗೆ ಮುನ್ನೆಚ್ಚರಿಕೆಯನ್ನು ನೀಡಿದೆ.
ಉತ್ತರ ಕರ್ನಾಟಕ ಮತ್ತು ಮಲೆನಾಡು ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದೆ. ವಿಶೇಷವಾಗಿ ಬೀದರ್, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಶೀತ ಅಲೆಯ ಮುನ್ಸೂಚನೆ ನೀಡಲಾಗಿದ್ದು, ವೃದ್ಧರು ಮತ್ತು ಮಕ್ಕಳು ಜಾಗರೂಕರಾಗಿರಲು ಸೂಚಿಸಲಾಗಿದೆ. ಇದೇ ಪರಿಸ್ಥಿತಿ ನಾಳೆ (ಡಿ.19) ಮತ್ತು ಶನಿವಾರವೂ (ಡಿ.20) ಮುಂದುವರಿಯುವ ಸಾಧ್ಯತೆಯಿದೆ.
ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಒಣ ಹವೆ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಆಕಾಶ ಶುಭ್ರವಾಗಿದ್ದರೂ, ಸೂರ್ಯಾಸ್ತದ ನಂತರ ತಾಪಮಾನದಲ್ಲಿ ತೀವ್ರ ಇಳಿಕೆಯಾಗಲಿದೆ.