Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High Court dismisses divorce petition ಮದುವೆಯಾಗಿ ಕೇವಲ 21 ದಿನಕ್ಕೆ ಡಿವೋರ್ಸ್‌ ಬಯಸಿದ ಪತ್ನಿ! ವಿಚ್ಛೇದನ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಕರ್ನಾಟಕಪ್ರಮುಖ

High Court dismisses divorce petition ಮದುವೆಯಾಗಿ ಕೇವಲ 21 ದಿನಕ್ಕೆ ಡಿವೋರ್ಸ್‌ ಬಯಸಿದ ಪತ್ನಿ! ವಿಚ್ಛೇದನ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: 21 ದಿನಗಳ ಕಾಲ ಮಾತ್ರ ಪತಿಯೊಂದಿಗೆ ವಾಸ ಮಾಡಿ ವರದಕ್ಷಿಣೆ ಕಿರುಕುಳ ಆರೋಪದಡಿ ವಿಚ್ಛೇದನ ಕೋರಿದ್ದ ಮಹಿಳೆಗೆ ವಿವಾಹ ಸ್ವರ್ಗದಲ್ಲಿ ನಿಶ್ಚಯವಾಗಿ ಭೂಮಿಯ ಮೇಲೆ ನಡೆಯುವ ಪವಿತ್ರ ಬಂಧನವಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ ಹೇಳಿದೆ.ಸಾಕ್ಷ್ಯಾಧಾರಗಳಿಲ್ಲ ಎಂದು ವಿಚ್ಛೇದನ ಅರ್ಜಿಯನ್ನು ವಜಾ ಮಾಡಿದೆ. ವಿಚ್ಛೇದನ ಮಂಜೂರು ಮಾಡುವಂತೆ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್‌ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಉಮೇಶ್‌ ಎಂ.ಅಡಿಗ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.’ಹಿಂದೂ ಕಾನೂನಿನಲ್ಲಿ ವಿವಾಹ ಸ್ವರ್ಗದಲ್ಲಿ ನಿಶ್ಚಯವಾಗಿ ಭೂಮಿಯ ಮೇಲೆ ನಡೆಯುವ ಬಂಧನವಾಗಿದೆ’ ಎಂದು ತಿಳಿಸಿದೆ.
ವಿವಾಹ ಕೇವಲ ಸಾಮಾಜಿಕ ಒಪ್ಪಂದ ಮಾತ್ರವಲ್ಲದೆ ವಿಧಿಯಿಂದ ವಿಧಿಸಲ್ಪಟ್ಟ ದೈವಿಕ ಪಾಲುದಾರಿಕೆಯ ಸಂಕೇತವಾಗಿರಲಿದೆ. ಆದರೆ, ಅರ್ಜಿದಾರ ಪತ್ನಿ ಮದುವೆ ಎಂದರೆ ಮಕ್ಕಳಾಟವೆಂದು ಭಾವಿಸಿ, ತನ್ನ ಶಿಕ್ಷಣ ಮುಂದುವರಿಸಲು ಪೋಷಕರ ಮನೆಗೆ ತೆರಳುವುದಕ್ಕಾಗಿ ಆಧಾರರಹಿತ ಆರೋಪ ಮಾಡಿದಂತೆ ತೋರುತ್ತಿದೆ ಎಂದು ಪೀಠ ತಿಳಿಸಿತು.
ಅರ್ಜಿದಾರ ಪತ್ನಿ ಕೇವಲ 21 ದಿನಗಳ ಕಾಲ ಮಾತ್ರ ಪತಿಯೊಂದಿಗೆ ವಾಸ ಮಾಡಿದ್ದಾರೆ. ಈ ಅವಧಿಯಲ್ಲಿ ದಂಪತಿಯ ನಡುವೆ ಯಾವುದೇ ಗೊಂದಲಗಳಿರಲಿಲ್ಲ. ಆದರೆ, ವರದಕ್ಷಿಣೆ ಕಿರುಕುಳದ ಆರೋಪದಲ್ಲಿ ತವರು ಮನೆಗೆ ಹಿಂದಿರುಗಿರುವುದಾಗಿ ಆರೋಪಿಸಿದ್ದಾರೆ. ವಾಸ್ತವವಾಗಿ ಆಷಾಢ ಮಾಸಕ್ಕಾಗಿ ತಾಯಿ ಮನೆಗೆ ಬಂದಿದ್ದು, ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರಹಾಕಿಲ್ಲ ಎಂಬ ಅಂಶ ಗೊತ್ತಾಗಿದೆ. ಹೀಗಾಗಿ, ಈ ಆರೋಪವು ಸಂಶಯಾಸ್ಪದದಿಂದ ಕೂಡಿದೆ. ಈ ಎಲ್ಲಅಂಶಗಳು ಅರ್ಜಿದಾರರ ನಡವಳಿಕೆ ವಿಶ್ವಾಸಾರ್ಹವಲ್ಲ. ಕೇವಲ ಪತಿಯಿಂದ ವಿಚ್ಛೇದನ ಪಡೆಯಲು ವರದಕ್ಷಿಣೆ ಕಿರುಕುಳ ಆರೋಪ ಮಾಡಲಾಗಿದೆ ಎಂದು ಪೀಠ ಹೇಳಿದೆ.
ಬೆಂಗಳೂರಿನಲ್ಲಿ 2012ರ ಮೇ 30ರಂದು ಆತ ಮತ್ತು ಆಕೆಯ ವಿವಾಹವಾಗಿತ್ತು. ಮದುವೆಯ ಬಳಿಕ ತುಮಕೂರಿನಲ್ಲಿದ್ದ ಪತಿಯ ಮನೆಯಲ್ಲಿ 21 ದಿನಗಳ ಕಾಲ ವಾಸವಿದ್ದಾರೆ. ಪತಿ 50 ಸಾವಿರ ರೂ. ಹೆಚ್ಚುವರಿ ವರದಕ್ಷಿಣೆ ನೀಡುವಂತೆ ಒತ್ತಾಯಿಸಿದ್ದರು. ಅಷ್ಟು ಮೊತ್ತ ಕೊಡಲು ಸಾಧ್ಯವಾಗದಿದ್ದಾಗ ಪತಿ – ಪತ್ನಿಯ ನಡುವೆ ಜಗಳಕ್ಕೆ ಕಾರಣವಾಗಿತ್ತು ಎನ್ನಲಾಗಿದೆ. ಬಳಿಕ ಪತ್ನಿ ವಿಚ್ಛೇದನ ಮತ್ತು ಶಾಶ್ವತ ಪರಿಹಾರ ಮತ್ತು ಜೀವನಾಂಶ ನೀಡುವಂತೆ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೌಟುಂಬಿಕ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅದು ಪ್ರಕೃತಿ ನಿಯಮ, ನಾಚಿಕೆ ಪಡೋದ್ಯಾಕೆ?; ನಟಿ ಅನಸೂಯಾ ಹೇಳಿಕೆ ವೈರಲ್

ನಟಿ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ದಾಳಿ

TAGGED:A wife who wants a divorce for only 21 days after getting married! High Court dismisses divorce petition
Share This Article
Facebook Twitter Copy Link Print
Previous Article ವಿಪಕ್ಷ ನಾಯಕ ಉಸ್ಮಾನ್ ಹಾದಿ ಗುಂಡಿಕ್ಕಿ ಹತ್ಯೆ : ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ
Next Article ನನಗೆ ಎರಡನೇ ಮದುವೆ ಆಗುವ ಆಸೆ ಇದೆ, ಆದರೆ ನನ್ನ ಗಂಡ ಡಿವೋರ್ಸ್ ಕೊಡ್ತಿಲ್ಲ- ಖ್ಯಾತ ನಟಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?