Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಗ್ರೀನ್ ಸಿಗ್ನಲ್ -17 ಮಾರ್ಗಸೂಚಿ ಹೊರಡಿಸಿದ ಪೊಲೀಸರು
ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಗ್ರೀನ್ ಸಿಗ್ನಲ್ -17 ಮಾರ್ಗಸೂಚಿ ಹೊರಡಿಸಿದ ಪೊಲೀಸರು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮತ್ತು ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು 17 ಅಂಶಗಳ ಮಾರ್ಗಸೂಚಿ ಹೊರಡಿಸಿದ್ದಾರೆ.

ಗೃಹ ಇಲಾಖೆ ಸಿದ್ಧಪಡಿಸಿರುವ ಈ ಷರತ್ತುಗಳ ಕುರಿತು ಕೆಎಸ್​​ಸಿಎ ಪದಾಧಿಕಾರಿಗಳು ಗೃಹ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಕೆಎಸ್​​ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ತಂಡ ಗೃಹ ಸಚಿವರನ್ನು ಭೇಟಿ ಮಾಡಿ ಈ ಕುರಿತು ಚರ್ಚಿಸಲಿದೆ. ಪೊಲೀಸ್ ಕಮಿಷನರ್ ಅವರು ನ್ಯಾ. ಮೈಕಲ್ ಡಿ‌ ಕುನ್ಹಾ ಸಮಿತಿ ವರದಿಯ ಶಿಫಾರಸುಗಳನ್ನು ಆಧರಿಸಿ, ಕಾಲ್ತುಳಿತದಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು ಈ 17 ಷರತ್ತುಗಳನ್ನು ವಿಧಿಸಿದ್ದಾರೆ.

ಮಾರ್ಗಸೂಚಿಗಳಲ್ಲಿನ ಪ್ರಮುಖ ಅಂಶಗಳೆಂದರೆ, ಸ್ಟೇಡಿಯಂ ಒಳಗೆ ಮತ್ತು ಹೊರಗೆ ಪ್ರವೇಶ ಮತ್ತು ನಿರ್ಗಮನ ವ್ಯವಸ್ಥೆಗಳ ಸುಧಾರಣೆ. ಪ್ರಸ್ತುತ, ಟಿಕೆಟ್ ವಿತರಣೆ ಮತ್ತು ಪ್ರೇಕ್ಷಕರ ಕ್ಯೂಗಳು ಫುಟ್​ಪಾತ್​​​ಗಳ ಮೇಲೆ ನಡೆಯುತ್ತಿದ್ದು, ಇದು ಸಾರ್ವಜನಿಕರಿಗೆ ಮತ್ತು ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತದೆ. ಇದನ್ನು ತಪ್ಪಿಸಲು ಪ್ರತ್ಯೇಕ ಸ್ಥಳಗಳನ್ನು ಗುರುತಿಸಬೇಕು. ಸಾರ್ವಜನಿಕರ ಓಡಾಟಕ್ಕೆ ಅವಕಾಶ ಕಲ್ಪಿಸಬೇಕು. ಹಾಗೆಯೇ, ಸ್ಟೇಡಿಯಂನ ಎಲ್ಲಾ ಗೇಟ್‌ಗಳನ್ನು ಕನಿಷ್ಠ ಆರು ಅಡಿ ಅಗಲಕ್ಕೆ ವಿಸ್ತರಿಸಬೇಕು. ಸದ್ಯದ ಕಿಕ್ಕಿರಿದ ಗೇಟ್‌ಗಳು ಮತ್ತು ಅಸಮವಾದ ಪ್ರವೇಶ ಮಾರ್ಗಗಳು ಅಪಾಯವನ್ನುಂಟುಮಾಡುತ್ತವೆ.

 

ಇದಲ್ಲದೆ, ಅಗ್ನಿಶಾಮಕ ಸುರಕ್ಷತೆಗಾಗಿ ಪ್ರತ್ಯೇಕ ನಿರ್ಗಮನ ದ್ವಾರಗಳನ್ನು ಕಡ್ಡಾಯಗೊಳಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಸ್ಟೇಡಿಯಂ ಒಳಗೆ ಪ್ರತ್ಯೇಕ ಸೌಲಭ್ಯಗಳನ್ನು ಒದಗಿಸಬೇಕು. ಸ್ಟೇಡಿಯಂ ಒಳಗೆ ಪ್ರವೇಶಿಸುವ ಪ್ರೇಕ್ಷಕರ ನೈಜ-ಸಮಯದ ಸಂಖ್ಯೆಯನ್ನು (ರಿಯಲ್ ಟೈಮ್ ಕೌಂಟ್) ನಿಖರವಾಗಿ ಇಟ್ಟುಕೊಳ್ಳುವ ವ್ಯವಸ್ಥೆ ಜಾರಿಗೆ ತರಬೇಕು. ಟಿಕೆಟ್‌ಗಳನ್ನು ಸ್ಟೇಡಿಯಂ ಒಳಗೆ ವಿತರಿಸಲು ಪ್ರತ್ಯೇಕ ಸ್ಥಳಗಳನ್ನು ಗೊತ್ತುಪಡಿಸಬೇಕು. ಸ್ಟೇಡಿಯಂ ಸುತ್ತಲಿನ ಪಾರ್ಕಿಂಗ್, ಪಿಕ್‌ಅಪ್ ಮತ್ತು ಡ್ರಾಪ್ ವ್ಯವಸ್ಥೆಗಳನ್ನು ಸುಧಾರಿಸಬೇಕು.

Share This Article
Facebook Twitter Copy Link Print
Previous Article ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು
Next Article ರೈಲಿನೊಳಗೆ ಸಿಗರೇಟ್ ಸೇದಿದ ವ್ಯಕ್ತಿ – ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?