Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ವಾಯು ಗುಣಮಟ್ಟ ಕುಸಿಯುತ್ತಲೇ ಇದ್ದು, ವಾಯುಮಾಲಿನ್ಯ ಹೆಚ್ಚುತ್ತಿದೆ.ಇತ್ತೀಚೆಗೆ ವಾಯು ಗುಣಮಟ್ಟ ಸೂಚ್ಯಂಕ (AQI) 180ರ ಮಟ್ಟವನ್ನು ತಲುಪಿದೆ. ಈ ಮಟ್ಟದ ಮಾಲಿನ್ಯವು ಸಾಮಾನ್ಯ ಜನರಿಗೂ ಆರೋಗ್ಯದ ಮೇಲೆ ಪರಿಣಾಮ ಬೀರುವಂತಹದ್ದಾಗಿದ್ದು, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಹೆಚ್ಚಿನ ಅಪಾಯವನ್ನುಂಟುಮಾಡುತ್ತದೆ.
ರಾಜ್ಯದೆಲ್ಲೆಡೆ ಉಂಟಾಗುತ್ತಿರುವ ಶೀತದಲೆಯ ಪರಿಣಾಮ ಈಗಾಗಲೇ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರಿಗೂ ಉಸಿರಾಟದ ಸಮಸ್ಯೆಗಳು ಎದುರಾಗುತ್ತಿವೆ. ಅದರೊಂದಿಗೆ ವಾಯು ಮಾಲಿನ್ಯ ಮತ್ತು ಹದಗೆಟ್ಟ ಗಾಳಿಯೂ ಸೇರಿ ಅನಾರೊಗ್ಯ ಉಂಟುಮಾಡಬಹುದೆಂದು ತಜ್ಞರು ಹೇಳುತ್ತಾರೆ. ಇಂದೂ ಬೆಂಗಳೂರಿನಲ್ಲಿ PM2.5 ಪ್ರಮಾಣ 121ಕ್ಕೆ ತಲುಪಿದ್ದು, PM10 ಪ್ರಮಾಣ 167ಕ್ಕೆ ಇಳಿದಿದೆ.
ಇದರಿಂದಾಗಿ ಅಸ್ತಮಾ, ಅಲರ್ಜಿ ಸೇರಿದಂತೆ ಹೃದಯ ಸಂಬಂಧಿ ಖಾಯಿಲೆಗಳೂ ಎದುರಾಗಬಹುದು. 150ಕ್ಕಿಂತ ಹೆಚ್ಚಿನ ಗಾಳಿಯ ಗುಣಮಟ್ಟ ಜನರಲ್ಲಿ ಅಸ್ತಮಾ ತಂದೊಡ್ಡಬಹುದಾಗಿದ್ದು, ಈ ಸಮಸ್ಯೆಯಿಂದ ಬಚಾವಾಗಲು ಏರ್ ಪ್ಯೂರಿಫೈಯರ್ ಬಳಸುವುದರ ಜೊತೆಗೆ ಆದಷ್ಟು ಮನೆಯಿಂದ ಹೊರಹೋಗದಿರೊ ಎಂದು ತಜ್ಞರು ಸಲಹೆ ನೀಡಿದ್ದಾರೆ.