Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ಶೀತ ಗಾಳಿ ತೀವ್ರವಾಗಿರುವ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಧಾರಣ ಶೀತ ಗಾಳಿ ಇರಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ವಾಡಿಕೆಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.