Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಇನ್ಮುಂದೆ ಸರ್ಕಾರಿ ನೌಕರರು ಸ್ಲೀವ್ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವಂತಿಲ್ಲ. ಈ ಬಗ್ಗೆ ಕರ್ನಾಟಕ ಸರ್ಕಾರಿ ನೌಕರರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದೆ.
ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಸರ್ಕಾರಿ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗುವಾಗ ಹೇಗಿರಬೇಕು, ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಕೆಲಸಗಳನ್ನು ಪಟ್ಟಿ ಮಾಡಿದೆ.
ಮುಖ್ಯವಾಗಿ, ನೌಕರರು ಹರಿದ ಜೀನ್ಸ್, ಸ್ಲೀವ್ಲೆಸ್ ಡ್ರೆಸ್‌ನಂತಹ ಅಸಭ್ಯ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಕೆಲವು ನೌಕರರು ಅಸಭ್ಯವಾಗಿ ಉಡುಗೆ ತೊಟ್ಟುಕೊಂಡು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಇಲಾಖೆಗೆ ದೂರುಗಳು ಬಂದಿವೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.