Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆ ಎಸ್ ಆರ್ ಟಿ ಸಿ ಗುಡ್ ನ್ಯೂಸ್ ನೀಡಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ದಿನಾಂಕ:25.12.2025 ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:19.12.2025, 20.12.2025 ಹಾಗೂ 24.12.2025 ರಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 26.12.2025 ಹಾಗೂ 28.12.2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಿದೆ ಎಂದು ಹೇಳಿದೆ.