Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಾಂಗ್ಲಾದಲ್ಲಿ ಹಿಂದೂ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ.
ಮೈಮನ್ ಸಿಂಗ್ ಜಿಲ್ಲೆಯ ಭಾಲುಕಾ ಪ್ರದೇಶದಲ್ಲಿ ಗಾರ್ಮೆಂಟ್ ಕಾರ್ಖಾನೆಯ ಕಾರ್ಮಿಕ ಹಿಂದೂ ಯುವಕ ದೀಪು ಚಂದ್ರದಾಸ್ ಎಂಬಾತನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.
ಯುವಕ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆ ಎಂದು ಆರೋಪಿಸಿ ಸ್ಥಳೀಯ ಗುಂಪು ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಬೆಂಕಿ ಹಚ್ಚಿದ್ದರು.
ಪ್ರಕರಣ ಸಂಬಂಧ ರ್ಯಾಪಿಡ್ ಆಕ್ಷನ್ ಬೆಟಾಲಿಯನ್ ಪಡೆ ಕಾರ್ಯಾಚರಣೆ ನಡೆಸಿ ಏಳು ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ಮೊಹಮ್ಮದ್ ಲಿಮೋನ್, ಮೊಹಮ್ಮದ್ ತಾರೆಕ್ ಹುಸೇನ್, ಮೊಹಮ್ಮದ್ ಮಾನಿಕ್ ಮಿಯಾ, ಇರ್ಷಾದ್ ಅಲಿ, ನಿಜುಮ್, ಅಲಂಗೀರ್ ಹುಸೇನ್, ಮೊಹಮ್ಮದ್ ಮಿರಾಜ್ ಬಂಧಿತ ಆರೋಪಿಗಳು.
ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಮೊಹಮ್ಮದ್ ಯೂನಸ್ ಸರ್ಕಾರ ರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬದ್ಧವಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವುದಾಗಿ ತಿಳಿಸಿದೆ.