Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಇಸ್ಲಾಮಾಬಾದ್: ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪತ್ನಿ ಬುಶ್ರಾ ಬೀಬಿಗೆ 17 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಪಾಕ್ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಖಾನ್ ಮತ್ತು ಬುಶ್ರಾ ಅವರಿಗೆ ಪಾಕಿಸ್ತಾನ ದಂಡ ಸಂಹಿತೆಯ ಸೆಕ್ಷನ್ 409 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
2023ರಲ್ಲಿ ತೋಷಖಾನಾ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ನ್ಯಾಯಾಲಯವು 14 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅದಕ್ಕೂ ಮುನ್ನ ಸೋರಿಕೆಯಾದ ದಾಖಲೆಗೆ ಸಂಬಂಧಿಸಿದ ವಿವಾದಾತ್ಮಕ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.
2021ರ ಮೇ ತಿಂಗಳಲ್ಲಿ ಆಗ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಹಾಗೂ ಅವರ ಪತ್ನಿ ಬುಶ್ರಾ ಬೀಬಿ ಅವರು ಸೌದಿ ಆರೇಬಿಯಕ್ಕೆ ಭೇಟಿ ನೀಡಿದ ಸಂದರ್ಭ ತಮಗೆ ಉಡುಗೊರೆಯಾಗಿ ನೀಡಿದ್ದ ಬುಲ್ಗಾರಿ ಆಭರಣವನ್ನು ಅಕ್ರಮವಾಗಿ ತಮ್ಮಲ್ಲಿಯೇ ಉಳಿಸಿಕೊಂಡಿದ್ದರು. ಒಂದು ರಿಂಗ್, ಬ್ರೇಸ್‌ಲೆಟ್, ಕತ್ತಿನ ಸರ ಹಾಗೂ ಒಂದು ಜೋಡಿ ಕಿವಿಯೋಲೆಗಳನ್ನು ಈ ಆಭರಣದ ಸೆಟ್ ಒಳಗೊಡಿದ್ದು, ಅವುಗಳ ಒಟ್ಟು ಮೌಲ್ಯ 7.50 ಕೋಟ ಪಾಕಿಸ್ತಾನಿ ರೂಪಾಯಿಗಳೆಂದು ಅಂದಾಜಿಸಲಾಗಿದೆ.
ಆದರೆ ದಂಪತಿಯು ಆಭರಣದ ಸೆಟ್‌ನ ಮೌಲ್ಯವನ್ನು ತೀರಾ ಕಡಿಮೆಗೊಳಿಸಿ, ತಮ್ಮ ವಶದಲ್ಲಿ ಇರಿಸಿದ್ದರಿಂದ ಪಾಕಿಸ್ತಾನದ ಬೊಕ್ಕಸಕ್ಕೆ 3.29 ಕೋಟಿ ರೂ.ನಷ್ಟವಾಗಿತ್ತು. 2022ರ ಎಪ್ರಿಲ್‌ನಲ್ಲಿ ಇಮ್ರಾನ್‌ಖಾನ್ ಸರಕಾರವನ್ನು ಅವಿಶ್ವಾಸ ಮತದ ಮೂಲಕ ಪತನಗೊಳಿಸಲಾಗಿತ್ತು.
No Power supply today ಬೆಂಗಳೂರಿನ ಈ ಪ್ರದೇಶಗಳಲ್ಲಿಂದು ಕರೆಂಟ್ ಇರಲ್ಲ: ಬೆಳಗಿನಿಂದ ಸಂಜೆವರೆಗೂ ವಿದ್ಯುತ್ ವ್ಯತ್ಯಯ