Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ : ದೆಹಲಿಯಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಆಗಿದೆ.
ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಾಪಾಸ್ ಆಗಿವೆ. ಈ ವಿಮಾನ ತಾಂತ್ರಿಕ ಸಮಸ್ಯೆಯಿಂದ ಹಿಂತಿರುಗಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದೆ. ವಿಮಾನ ಸಮಯಕ್ಕೆ ಸರಿಯಾಗಿ ಹೊರಟಿತ್ತು. ಆದರೆ ಟೇಕ್ ಆಫ್ ನಂತರ ಕಾಕ್‌ಪಿಟ್‌ನಲ್ಲಿ ತಾಂತ್ರಿಕ ದೋಷದ ಲಕ್ಷಣಗಳು ಕಾಣಿಸಿಕೊಂಡಿದ್ದು, ಪೈಲಟ್ ತಕ್ಷಣ ಎಚ್ಚರಿಕೆ ವಹಿಸಿ ಹಿಂತಿರುಗುವ ನಿರ್ಧಾರ ತೆಗೆದುಕೊಂಡಿದ್ದಾರೆ.
ವಿಮಾನದಲ್ಲಿ ಇದ್ದಂತಹ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಯಾವುದೇ ಅಪಾಯ ಆಗಿಲ್ಲ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ. ಸ್ವಲ್ಪದರಲ್ಲಿಯೇ ಮತ್ತೊಂದು ಅತಿ ದೊಡ್ಡ ಅನಾಹುತ ತಪ್ಪಿದೆ.
https://www.newsics.com/2025/12/22/bomb-threat-email-sent-to-alur-taluk-office-in-hassan/