Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ‘ಬಾಂಗ್ಲಾದೇಶದ ಪರ ನಿಂತು ಪಾಕ್ ಹೋರಾಟ ಮಾಡುತ್ತೆ ಎಂದ ಪಾಕಿಸ್ತಾನ
ದೇಶಪ್ರಮುಖವಿದೇಶ

‘ಬಾಂಗ್ಲಾದೇಶದ ಪರ ನಿಂತು ಪಾಕ್ ಹೋರಾಟ ಮಾಡುತ್ತೆ ಎಂದ ಪಾಕಿಸ್ತಾನ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಇಸ್ಲಾಮಾಬಾದ್: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಮುಂದಿಟ್ಟುಕೊಂಡು ಭಾರತ ದಾಳಿಗೆ ಮುಂದಾದ್ರೆ.. ಪಾಕಿಸ್ತಾನ ತನ್ನ ಸಂಪೂರ್ಣ ಬಲದೊಂದಿಗೆ ಬಾಂಗ್ಲಾದೇಶ ಪರ ನಿಂತ ಹೋರಾಟ ನಡೆಸಲಿದೆ ಎಂದು ಪಾಕಿಸ್ತಾನ ಸರ್ಕಾರ ಎಚ್ಚರಿಸಿದೆ.

ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹದಗೆಟ್ಟಿದ್ದು, ಇದರ ಬೆನ್ನಲ್ಲೇ ಈ ಪರಿಸ್ಥಿತಿಯನ್ನು ತನ್ನ ಲಾಭಕ್ಕೆ ಬಳಸಿಕೊಳ್ಳಲು ಪಾಕಿಸ್ತಾನ ಸಂಚು ರೂಪಿಸುತ್ತಿದೆ.

ಬಾಂಗ್ಲಾದೇಶ ಮತ್ತು ಭಾರತದ ನಡುವಿನ ಅಸಮಾಧಾನವನ್ನು ಮತ್ತು ಶೀತಲ ಸಮರವನ್ನು ದುರುಪಯೋಗಪಡಿಸಿಕೊಳ್ಳಲು ಪಾಕ್ ಪ್ರಯತ್ನಿಸುತ್ತಿದೆ.
ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರ ಪಕ್ಷವಾದ ಪಾಕಿಸ್ತಾನ ಮುಸ್ಲಿಂ ಲೀಗ್ (ಪಿಎಂಎಲ್)ನ ಯುವ ವಿಭಾಗದ ನಾಯಕ ಕಮ್ರಾನ್ ಸಯೀದ್ ಉಸ್ಮಾನಿ ಇಂದು ಭಾರತಕ್ಕೆ ಬೆದರಿಕೆ ಹಾಕಿದ್ದು, ಬಾಂಗ್ಲಾದೇಶದ ಮೇಲೆ ಭಾರತದಿಂದ ಯಾವುದೇ ದಾಳಿ ನಡೆದರೆ ಪಾಕಿಸ್ತಾನದ ಸೈನ್ಯ ಮತ್ತು ಕ್ಷಿಪಣಿಗಳು ಅದಕ್ಕೆ ಪ್ರತಿಕ್ರಿಯಿಸುತ್ತವೆ ಎಂದು ಹೇಳಿದ್ದಾರೆ.

‘ಭಾರತವು ಬಾಂಗ್ಲಾದೇಶದ ಸ್ವಾಯತ್ತತೆಯ ಮೇಲೆ ದಾಳಿ ಮಾಡಿದರೆ, ಯಾರಾದರೂ ಬಾಂಗ್ಲಾದೇಶವನ್ನು ಕೆಟ್ಟ ಉದ್ದೇಶದಿಂದ ನೋಡಲು ಧೈರ್ಯ ಮಾಡಿದರೆ ಪಾಕಿಸ್ತಾನದ ಜನರು, ಪಾಕಿಸ್ತಾನಿ ಸಶಸ್ತ್ರ ಪಡೆಗಳು ಮತ್ತು ನಮ್ಮ ಕ್ಷಿಪಣಿಗಳು ಸುಮ್ಮನಿರುವುದಿಲ್ಲ, ನಾವು ಬಾಂಗ್ಲಾದೇಶದ ಸಹಾಯಕ್ಕೆ ರೆಡಿ ಇರುತ್ತೇವೆ ಎಂಬುದನ್ನು ನೆನಪಿಡಿ’ ಎಂದು ಹೇಳಿದ್ದಾರೆ.
ಸೇನಾ ಮೈತ್ರಿಗೆ ಕರೆ ಅಲ್ಲದೆ, ಅವರು ಪಾಕಿಸ್ತಾನ (Pakistan) ಮತ್ತು ಬಾಂಗ್ಲಾದೇಶದ ನಡುವೆ ಮಿಲಿಟರಿ ಮೈತ್ರಿಗೆ ಕರೆ ನೀಡಿದ್ದು, ಬಾಂಗ್ಲಾದೇಶವನ್ನು ಭಾರತದ ಸೈದ್ಧಾಂತಿಕ ಪ್ರಾಬಲ್ಯಕ್ಕೆ ತಳ್ಳುವುದನ್ನು ಪಾಕಿಸ್ತಾನ ಒಪ್ಪುವುದಿಲ್ಲ.

ಒಂದುವೇಳೆ ಭಾರತ ಬಾಂಗ್ಲಾದೇಶದ ಮೇಲೆ ದಾಳಿ ಮಾಡಿದರೆ ಅಥವಾ ಅದರ ಸ್ವಾಯತ್ತತೆಯ ಮೇಲೆ ದುಷ್ಟ ದೃಷ್ಟಿ ಬೀರಿದರೆ, ಪಾಕಿಸ್ತಾನ ಅದಕ್ಕೆ ಬಲವಾಗಿ ಪ್ರತಿಕ್ರಿಯಿಸುತ್ತದೆ ಎಂದು ಎಚ್ಚರಿಸಿದ್ದಾರೆ.
ಮತ್ತೊಂದು ವಿಡಿಯೋದಲ್ಲಿ, ಉಸ್ಮಾನಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ನಡುವೆ ಔಪಚಾರಿಕ ಮಿಲಿಟರಿ ಮೈತ್ರಿಗೆ ಕರೆ ನೀಡುವ ಮೂಲಕ ಪಾಕಿಸ್ತಾನದ ಜೊತೆ ಕೈಜೋಡಿಸಲು ಬಾಂಗ್ಲಾದೇಶವನ್ನು ಆಹ್ವಾನಿಸಿದ್ದಾರೆ. ಭಾರತದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬಾಂಗ್ಲಾದೇಶಕ್ಕೆ ಕಾಟ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಹಿಂದೂ ರಾಷ್ಟ್ರವನ್ನು ಸ್ಥಾಪಿಸಲು ಭಾರತವು ಅಖಂಡ ಭಾರತ ಸಿದ್ಧಾಂತದ ಅಡಿಯಲ್ಲಿ ಬಾಂಗ್ಲಾದೇಶವನ್ನು ಕೆಡವಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

‘ನಮ್ಮ ಪ್ರಸ್ತಾಪವೆಂದರೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮಿಲಿಟರಿ ಮೈತ್ರಿಯನ್ನು ರಚಿಸಬೇಕು. ಪಾಕಿಸ್ತಾನ ಬಾಂಗ್ಲಾದೇಶದಲ್ಲಿ ಮಿಲಿಟರಿ ನೆಲೆಯನ್ನು ಸ್ಥಾಪಿಸಬೇಕು ಮತ್ತು ಬಾಂಗ್ಲಾದೇಶ ಪಾಕಿಸ್ತಾನದಲ್ಲಿ ಮಿಲಿಟರಿ ನೆಲೆಯನ್ನು ಸ್ಥಾಪಿಸಬೇಕು. ಪಾಕಿಸ್ತಾನ-ಬಾಂಗ್ಲಾದೇಶ ಮಿಲಿಟರಿ ಪಾಲುದಾರಿಕೆಯು ಪ್ರಾದೇಶಿಕ ಶಕ್ತಿಯ ಚಲನಶೀಲತೆಯನ್ನು ಬದಲಾಯಿಸುತ್ತದೆ ಮತ್ತು ಜಾಗತಿಕವಾಗಿ ಎರಡೂ ದೇಶಗಳು ತಮ್ಮ ಶಕ್ತಿಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲು ಸಹಾಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಬಾಂಗ್ಲಾದೇಶ ಪಾಕಿಸ್ತಾನದ ಈ ಆಫರ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣುತ್ತೆ..

TAGGED:Pakistan says it will fight for Bangladesh
Share This Article
Facebook Twitter Copy Link Print
Previous Article ಸರ್ಕಾರಿ ನೌಕರರಿಗೆ ನ್ಯೂ ಇಯರ್ ಗಿಫ್ಟ್ ಕೊಟ್ಟ ಕೇಂದ್ರ ಸರ್ಕಾರ
Next Article ಲವರ್ ಬಿಟ್ಟು ಬೇರೊಂದು ಯುವತಿಗೆ ತಾಳಿಕಟ್ಟಿದ್ದ ಪ್ರಿಯಕರ ಅರೆಸ್ಟ್ 

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?