Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ರಾಯಭಾರಿಯಾಗಿ ಪ್ರಕಾಶ್ ರಾಜ್: ಸಿದ್ದರಾಮಯ್ಯ
ಕರ್ನಾಟಕಪ್ರಮುಖಮನರಂಜನೆ

17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ರಾಯಭಾರಿಯಾಗಿ ಪ್ರಕಾಶ್ ರಾಜ್: ಸಿದ್ದರಾಮಯ್ಯ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್‌ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡ್ತೀನಿ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಿತಿ ನಿರ್ಧರಿಸಿದಂತೆ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ. ಜೊತೆಗೆ ಇತ್ತೀಚಿಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು, ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ.

ಮಹಿಳೆಯರ ಸಬಲೀಕರಣದ ಥೀಮ್ ಮಾಡುವ ಯೋಚನೆ ಇದೆ. ಸಂಜೆ ಒಳಗೆ ಥೀಮ್ ಬಿಡುಗಡೆ ಮಾಡ್ತೀವಿ. ಈ ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಈ ಉತ್ಸವ ಅನುಕೂಲ ಮಾಡಿಕೊಡುತ್ತದೆ. ಲೂಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ನಲ್ಲಿ ಪ್ರದರ್ಶನ ಮಾಡಲಾಗುವುದು. ಈವರೆಗೂ 110 ಚಿತ್ರಗಳಿಂದ ಅರ್ಜಿ ಬಂದಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವಾಗಿದೆ ಎಂದಿದ್ದಾರೆ.
ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ. ನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ.
ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ ಎಂದು ಮಾಹಿತಿ ನೀಡಿದರು.

ಮಾರುಕಟ್ಟೆಗೆ ಬಂದಿದೆ ನಕಲಿ ಶುಂಠಿ. ಅಸಲಿ ಅಂತಾ ಹೇಗೆ ಗುರುತಿಸುವುದು?

TAGGED:Prakash Raj to be ambassador of 17th Bangalore International Film Festival: Siddaramaiah
Share This Article
Facebook Twitter Copy Link Print
Previous Article ಮಾರುಕಟ್ಟೆಗೆ ಬಂದಿದೆ ನಕಲಿ ಶುಂಠಿ. ಅಸಲಿ ಅಂತಾ ಹೇಗೆ ಗುರುತಿಸುವುದು?
Next Article ಮಲಗಿದ ತಕ್ಷಣ ನಿದ್ದೆ ಬರುತ್ತಿದೆಯೇ? ಹಾಗಾದ್ರೆ ಎಚ್ಚರ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?