Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಶಹಜಹಾನ್‌ಪುರ: ರೈಲೊಂದು ಹಳಿ ದಾಟುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ಅವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಈ ಐವರೂ ಒಂದೇ ಮೋಟಾರ್ ಸೈಕಲ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅವರು ಹೇಳಿದ್ದಾರೆ.
ರೌಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ರೌಜಾ ರೈಲ್ವೆ ನಿಲ್ದಾಣದ ಬಳಿ, ಪಾದಚಾರಿ ಮಾರ್ಗದ ಮೂಲಕ ಬೈಕ್ ರೈಲು ಮಾರ್ಗವನ್ನು ದಾಟುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.