Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Explosion near Mysore Palace ಮೈಸೂರು ಅರಮನೆ ಬಳಿ ಸ್ಫೋಟ ಪೂರ್ವನಿಯೋಜಿತವಾ: ಎನ್‌ಐಎನಿಂದ ಇಬ್ಬರು ಶಂಕಿತರ ವಿಚಾರಣೆ
ಕರ್ನಾಟಕದೇಶಪ್ರಮುಖ

Explosion near Mysore Palace ಮೈಸೂರು ಅರಮನೆ ಬಳಿ ಸ್ಫೋಟ ಪೂರ್ವನಿಯೋಜಿತವಾ: ಎನ್‌ಐಎನಿಂದ ಇಬ್ಬರು ಶಂಕಿತರ ವಿಚಾರಣೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ನಗರದ ಅರಮನೆ ಆವರಣದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಫೋಟ ದೆಹಲಿ ಸ್ಫೋಟದ ಮತ್ತೊಂದು ಭಾಗವಾಗಿದೆಯಾ ಎಂಬ ಶಂಕೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲೇ ಶುಕ್ರವಾರ ಮೈಸೂರಿಗೆ ಎನ್ ಐಎ ತಂಡ ಆಗಮಿಸಿ ತನಿಖೆಗಿಳಿದಿದ್ದು, ಶಂಕಿತ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಹೀಲಿಯಂ ಸಿಲಿಂಡರ್‌ ಸ್ಫೋಟಗೊಂಡಿರುವುದು ಆಕಸ್ಮಿಕ ಅಲ್ಲ, ಪೂರ್ವಯೋಜಿತ ಪ್ರಕರಣ ಎಂಬ ಅನುಮಾನಗಳು ಮೂಡಿದ್ದು ಈ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

ಈ ಮಧ್ಯೆ, ಘಟನೆ ಸಂಬಂಧ ಮೈಸೂರು ಪೊಲೀಸರೂ ಎಫ್‌ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆಯಾದರೂ ತನಿಖಾ ತಂಡಗಳ ಲೆಕ್ಕಾಚಾರ ಬೇರೆಯದೇ ಇರುವಂತಿದೆ.

ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್‌ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ. ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್-ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಬಲೂನು ಮಾರಾಟಗಾರ 15 ದಿನಗಳ ಹಿಂದೆ ಮೈಸೂರಿಗೆ ಆಗಮಿಸಿದ್ದು, ಲಷ್ಕರ್‌ ಮೊಹಲ್ಲಾದಲ್ಲಿರುವ ಷರೀಫ್‌ ಲಾಡ್ಜ್‌ ನಲ್ಲಿ ಉಳಿದುಕೊಂಡಿದ್ದ ಎನ್ನಲಾಗಿದೆ.

ಸದ್ಯಕ್ಕಂತೂ ಎನ್‌ಐಎ ಅಧಿಕಾರಿಗಳ ಭೇಟಿ ವಿಚಾರ ಕುತೂಹಲ ಮೂಡಿಸಿದ್ದು, ಸ್ಫೋಟಕ್ಕೆ ಕಾರಣ ಏನು ಎಂಬುದರ ತನಿಖೆ ಹಾಗೂ ಸ್ಫೋಟ ಹಿಂದಿನ ರಹಸ್ಯ ಬೇಧಿಸಲು ಎನ್ಐಎ ಅಧಿಕಾರಿಗಳು ಮುಂದಾಗಿದ್ದಾರೆ.

ಉತ್ತರ ಪ್ರದೇಶದಿಂದ ಮೈಸೂರಿಗೆ ಬಂದಿದ್ದ ಸಲೀಂ ಕಳೆದ 15 ದಿನಗಳಿಂದ ಮೈಸೂರಲ್ಲಿ ವಾಸವಾಗಿದ್ದ. ಅಲ್ಲದೇ ಲಷ್ಕರ್ ಮೊಹಲ್ಲಾದಲ್ಲಿ ಸಲೀಂ ವಾಸವಿದ್ದ, ಮೈಸೂರು ಅರಮನೆ, ದೇವರಾಜ ಅರಸು ರಸ್ತೆ, ಕೆಆರ್ ಸರ್ಕಲ್, ಜಗನ್ಮೋಹನ‌ ಅರಮನೆ, ಮೃಗಾಲಯ ಬಳಿ ವ್ಯಾಪಾರದ ನೆಪದಲ್ಲಿ ಅಡ್ಡಾಡುತ್ತಿದ್ದ ಎಂದು ತಿಳಿದುಬಂದಿದೆ.

ಸರ್ವಿಸ್ ಲಾಡ್ಜ್ ನಲ್ಲಿ ವಾಸವಿದ್ದ ಸಲೀಂ ಬೆಳಗ್ಗೆ‌ ಲಾಡ್ಜ್ ಬಿಟ್ಟರೆ ತಡರಾತ್ರಿ ಲಾಡ್ಜ್ ಗೆ ಹಿಂತಿರುಗುತ್ತಿದ್ದ ಎಂಬುದು ಗೊತ್ತಾಗಿದೆ.

Yearly Horoscope ವರ್ಷದ ರಾಶಿ ಭವಿಷ್ಯ 2026: ಮೇಷ- ಸಾಲ ಮಾಡುವುದರಲ್ಲೇ ಖುಷಿ

ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿನಿ ರಶ್ಮಿಯ ಕನಸೆಲ್ಲ ನುಚ್ಚುನೂರು…

TAGGED:Explosion near Mysore Palace: NIA probes
Share This Article
Facebook Twitter Copy Link Print
Previous Article ವಿಮಾ ಹಣಕ್ಕಾಗಿ ಪತ್ನಿ ಸೇರಿ ನಾಲ್ವರನ್ನು ಬೆಂಕಿ ಹಚ್ಚಿ ಕೊಂದ ಪಾಪಿ ಪತಿ.!
Next Article ಎಣ್ಣೆಪ್ರಿಯರೇ ಎಚ್ಚರ… ಮದ್ಯಪಾನದಿಂದ ಬಾಯಿ ಕ್ಯಾನ್ಸರ್: ಟಾಟಾ ಸಂಶೋಧನೆಯಲ್ಲಿ ಬಹಿರಂಗ

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?