Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿಕ್ಕಬಳ್ಳಾಪುರ : ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ.
ಬೈಕ್‌ಗೆ ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ಬೈಕ್ನಲ್ಲಿದ್ದ ನಾಲ್ವರು ನಿನ್ನೆ ದಾರುಣವಾಗಿ ಮೃತಪಟ್ಟಿದ್ದರು. ಮನೋಜ್, ನರಸಿಂಹ, ನಂದೀಶ್ ಹಾಗೂ ಅರುಣ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಆ ಪೈಕಿ ನರಸಿಂಹ ಮತ್ತು ನಂದೀಶ್ ಸಹೋದರರು. ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಬರುತ್ತಿದ್ದ ಯುವಕರು, ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಟಿಪ್ಪರ್ ಬೈಕ್‌ಗೆ ಗುದ್ದಿದೆ.
ಮೃತರ ಪೈಕಿ ನರಸಿಂಹ ಅವರ ವಿವಾಹ ಕೆಲ ತಿಂಗಳ ಹಿಂದೆಯಷ್ಟೇ ನಡೆದಿತ್ತು. ಪ್ರೀತಿಸಿ ಹಠಕ್ಕೆ ಬಿದ್ದು ನರಸಿಂಹರನ್ನು ಮದುವೆಯಾಗಿದ್ದ ಯುವತಿ 6 ತಿಂಗಳ ಒಳಗೆಯೇ ವಿಧಿಯಾಟಕ್ಕೆ ಗಂಡನನ್ನು ಕಳೆದುಕೊಂಡಿದ್ದಾರೆ.
ಅಪಘಾತದಲ್ಲಿ ಅಣ್ಣ ನರಸಿಂಹ, ತಮ್ಮ ನಂದೀಶ್ ಅಗಲುವಿಕೆ ಕುಟುಂಬ ಕಣ್ಣೀರಲ್ಲಿ ಕೈತೊಳೆಯುವಂತೆ ಮಾಡಿದೆ. ಕಳೆದ ಐದು ವರ್ಷಗಳ ಹಿಂದೆ ಮೃತರ ತಂದೆಯೂ ಕ್ರಿಸ್ಮಸ್ ಹಬ್ಬದ ದಿನವೇ ಮೃತಪಟ್ಟಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ಇಬ್ಬರು ಗಂಡು ಮಕ್ಕಳೂ ಈಗ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಕಾರಣ ತಾಯಿಯ ಗೋಳಾಟ ನೆರೆದಿದ್ದವರ ಕಣ್ಣಲ್ಲೂ ನೀರು ತರಿಸಿದೆ.
https://www.newsics.com/2025/12/27/a-cigarette-that-costs-18-rupees-is-now-72-rupees/