Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೋದಿ ಫೋಟೋ ಶೇರ್ ಮಾಡಿ ರಾಹುಲ್ ಗಾಂಧಿಗೆ ಪರೋಕ್ಷ ಪಾಠ ಮಾಡಿದ ಮಧ್ಯಪ್ರದೇಶದ ಮಾಜಿ ಸಿಎಂ
ದೇಶಪ್ರಮುಖ

ಮೋದಿ ಫೋಟೋ ಶೇರ್ ಮಾಡಿ ರಾಹುಲ್ ಗಾಂಧಿಗೆ ಪರೋಕ್ಷ ಪಾಠ ಮಾಡಿದ ಮಧ್ಯಪ್ರದೇಶದ ಮಾಜಿ ಸಿಎಂ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರಾಜ್ಯಸಭಾ ಕಾಂಗ್ರೆಸ್ ಸಂಸದ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಸಾಮಾಜಿಕ ಜಾಲತಾಣದಲ್ಲಿ, ಹಂಚಿಕೊಂಡ ಒಂದು ಹಳೆಯ ಫೋಟೋ, ಬಿಜೆಪಿ, ಆರ್‌ಎಸ್‌ಎಸ್ ಮತ್ತು ಕಾಂಗ್ರೆಸ್ ಒಳರಾಜಕೀಯ ಕುರಿತು ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ದಿಗ್ವಿಜಯ ಸಿಂಗ್ ಅವರು Quora ದಲ್ಲಿ ಪೋಸ್ಟ್ ಮಾಡಿರುವ ಚಿತ್ರದಲ್ಲಿ, ನರೇಂದ್ರ ಮೋದಿಯವರು, ಸಾಮಾನ್ಯ ಕಾರ್ಯಕರ್ತನಂತೆ ತಮ್ಮ ನಾಯಕ ಎಲ್.ಕೆ. ಅಡ್ವಾಣಿಯವರ ಬಳಿ ಕೆಳಗೆ ಕುಳಿತಿದ್ದಾರೆ. ಇದನ್ನ ಪೋಸ್ಟ್ ಮಾಡಿರುವ ಸಿಂಗ್, “ಒಬ್ಬ ತಳಮಟ್ಟದ ಆರ್‌ಎಸ್‌ಎಸ್ ಸ್ವಯಂಸೇವಕ ಮತ್ತು ಜನಸಂಘ/ಬಿಜೆಪಿ ಕಾರ್ಯಕರ್ತ ತನ್ನ ನಾಯಕರ ಪಾದಗಳ ಕೆಳಗೆ ಕುಳಿತುಕೊಳ್ಳುವುದರಿಂದ ನಿರಂತರ ಪರಿಶ್ರಮದ ಮೂಲಕ ರಾಜ್ಯದ ಮುಖ್ಯಮಂತ್ರಿ ಹಾಗೂ ನಂತರ ದೇಶದ ಪ್ರಧಾನಿಯಾಗುವವರೆಗೆ ಹೇಗೆ ಬೆಳೆಯಬಹುದು ಎಂಬುದನ್ನು ಈ ಫೋಟೋ ಸ್ಪಷ್ಟವಾಗಿ ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನು ಸಂಘಟನೆಯ ಶಕ್ತಿಯ ಜೀವಂತ ಉದಾಹರಣೆ ಎಂದು ಬಣ್ಣಿಸಿದ ದಿಗ್ವಿಜಯ್ ಸಿಂಗ್, ಯಾವುದೇ ರಾಜಕೀಯ ಪಕ್ಷದ ನಿಜವಾದ ಶಕ್ತಿ ಅದರ ಕಾರ್ಯಕರ್ತರು ಮತ್ತು ಬಲವಾದ ಸಂಘಟನೆಯಿಂದ ಬರುತ್ತದೆ ಎನ್ನುವುದರೊಂದಿಗೆ “ಜೈ ಸಿಯಾ ರಾಮ್” ಎಂದು ತಮ್ಮ ಪೋಸ್ಟ್ ಅನ್ನು ಮುಗಿಸಿದ್ದಾರೆ.

ರಾಹುಲ್ ಗಾಂಧಿಗೆ ಪರೋಕ್ಷ ಪಾಠ..?
ದಿಗ್ವಿಜಯ್ ಸಿಂಗ್ ತಮ್ಮ ಮತ್ತೊಂದು ಪೋಸ್ಟ್‌ನಲ್ಲಿ ರಾಹುಲ್ ಗಾಂಧಿಯನ್ನು ಟ್ಯಾಗ್ ಮಾಡಿ, ಕಾಂಗ್ರೆಸ್ ಪಕ್ಷದೊಳಗಿನ ಸಂಘಟನಾ ಸುಧಾರಣೆಗಳ ಅಗತ್ಯವನ್ನು ಪ್ರಸ್ತಾಪಿಸಿದ್ದಾರೆ. ಸಾಮಾಜಿಕ ಮತ್ತು ಆರ್ಥಿಕ ವಿಷಯಗಳ ಕುರಿತು ರಾಹುಲ್ ಗಾಂಧಿಯ ತಿಳುವಳಿಕೆಯನ್ನು ಮೆಚ್ಚಿಕೊಂಡಿದ್ದಾರೆ.
ಮುಂದುವರೆದು, ಚುನಾವಣಾ ಆಯೋಗಕ್ಕೆ ಸುಧಾರಣೆಯ ಅಗತ್ಯವಿರುವಂತೆ, ಕಾಂಗ್ರೆಸ್ ಪಕ್ಷಕ್ಕೂ ರಚನಾತ್ಮಕ ಬದಲಾವಣೆಗಳ ಅಗತ್ಯವಿದೆ ಎಂದು ದಿಗ್ವಿಜಯ ಸಿಂಗ್, ಪಕ್ಷದ ಸಂಘಟನೆಯನ್ನು ಬಲಪಡಿಸುವತ್ತ ಇನ್ನಷ್ಟು ಗಮನ ಹರಿಸಬೇಕೆಂದು ಸಲಹೆ ನೀಡಿದ್ದಾರೆ. ಇದೇ ವೇಳೆ, ನಾಯಕತ್ವ ಮಾತ್ರವಲ್ಲದೆ, ಬಲವಾದ ಸಂಘಟನಾ ವ್ಯವಸ್ಥೆಯೇ ಚುನಾವಣಾ ಯಶಸ್ಸಿಗೆ ಪ್ರಮುಖ ಕಾರಣವಾಗುತ್ತದೆ ಎಂದು ತಿಳಿಸಿದ್ದಾರೆ.

https://x.com/digvijaya_28/status/2001870821984473204?ref_src=twsrc%5Etfw%7Ctwcamp%5Etweetembed%7Ctwterm%5E2001870821984473204%7Ctwgr%5Edc971fba6d64403be5b3e146b0ac0998a681179f%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Digvijay Singh indirectly taught Rahul Gandhi a lesson by sharing Modi's photo!
Share This Article
Facebook Twitter Copy Link Print
Previous Article ಗಸ್ತು ತೆರಳಿದ್ದಾಗ ಹುಲಿ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಬಲಿ
Next Article ಶನಿವಾರವೇ ಅನಿರೀಕ್ಷಿತ ಎಲಿಮಿನೇಷನ್ : ಪ್ರಮುಖ ಸ್ಪರ್ಧಿಯೇ ದೊಡ್ಮನೆ ಯಿಂದ ಔಟ್ ಔಟ್

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?