Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೌಟುಂಬಿಕ ನ್ಯಾಯಾಲಯಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡುವುದಕ್ಕೆ ಅಧಿಕಾರವಿಲ್ಲ : ಹೈಕೋರ್ಟ್
ಕರ್ನಾಟಕದೇಶಪ್ರಮುಖ

ಕೌಟುಂಬಿಕ ನ್ಯಾಯಾಲಯಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡುವುದಕ್ಕೆ ಅಧಿಕಾರವಿಲ್ಲ : ಹೈಕೋರ್ಟ್

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com 

ಬೆಂಗಳೂರು : ಡೈವೋರ್ಸ್ ಪ್ರಕರಣಗಳಲ್ಲಿ ಪತ್ನಿ ಮತ್ತು ಮಕ್ಕಳ ಮಾಸಿಕ ಜೀವನಾಂಶ ಪಾವತಿಸಲು ಕೋರಿ ಸಿಆರ್​ಪಿಸಿ 125 ಅಡಿಯಲ್ಲಿ ಸಲ್ಲಿಸುವ ಅರ್ಜಿಗಳ ವಿಚಾರಣೆ ನಡೆಸಿ ಆದೇಶಗಳನ್ನು ಹೊರಡಿಸುವ ಸಂದರ್ಭಗಳಲ್ಲಿ ಲುಕ್​ಔಟ್‌ ನೋಟಿಸ್‌ ಜಾರಿ ಮಾಡಲು ಕೌಟುಂಬಿಕ ನ್ಯಾಯಾಲಯಕ್ಕೆ ಅಧಿಕಾರವಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

 

ಕೌಟುಂಬಿಕ ನ್ಯಾಯಾಲಯಕ್ಕೆ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡುವುದಕ್ಕೆ ಅಧಿಕಾರವಿಲ್ಲ ಎಂಬುದಾಗಿ ಸುಪ್ರೀಂಕೋರ್ಟ್‌ ಹಲವು ಪ್ರಕರಣಗಳಲ್ಲಿ ತಿಳಿಸಿದೆ. ಸುಪ್ರೀಂಕೋರ್ಟ್​​ನ ಆದೇಶದ ಹೊರತಾಗಿಯೂ ಲುಕ್​ಔಟ್‌ ನೋಟಿಸ್‌ ಮುಂದುವರೆಸುವುದು ಕಾನೂನುಬಾಹಿರವಾಗಿದೆ. ಇದು ಸಂವಿಧಾನದ 21ನೇ ವಿಧಿಯಡಿ ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಪೀಠ ಹೇಳಿದೆ.

 

ಮಾಸಿಕ ಜೀವನಾಂಶ ಪಾವತಿ ಮಾಡದ ಹಿನ್ನೆಲೆಯಲ್ಲಿ, ಕೌಟುಂಬಿಕ ನ್ಯಾಯಾಲಯವು ಜಾರಿ ಮಾಡಿದ್ದ ಲುಕ್​ಔಟ್‌ ನೋಟಿಸ್ ಪ್ರಶ್ನಿಸಿ, ಪ್ರಸ್ತುತ ಕುವೈತ್‌ನಲ್ಲಿ ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಮೂಲದ ಮಹಮ್ಮದ್‌ ಅಜೀಂ ಎಂಬವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಲಲಿತಾ ಕನೆಗಂಟ್ಟಿ ಅವರಿದ್ದ ನ್ಯಾಯಪೀಠ, ಸೆಪ್ಟೆಂಬರ್ 22ರಂದು ಈ ಆದೇಶ ನೀಡಿದೆ.

 

ಅಲ್ಲದೆ, ಯಾವುದೇ ಆರೋಪಿಗಳು ಕ್ರಿಮಿನಲ್‌ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವುದನ್ನು ತಡೆಯಲು ಲುಕ್​ಔಟ್‌ ನೋಟಿಸ್‌ ಜಾರಿ ಮಾಡುವುದಕ್ಕೆ ಕ್ರಿಮಿನಲ್‌ ಪ್ರಕರಣಗಳಲ್ಲಿ ಅವಕಾಶವಿದೆ. ಅಲ್ಲದೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಜೀವನಾಂಶ ಪಾವತಿಸದಿದ್ದರೆ, ಅಂತವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಬಂಧನ ವಾರಂಟ್‌ ಹೊರಡಿಸುವುದು ಮತ್ತು ಸಿವಿಲ್ ಆರೋಪದಲ್ಲಿ ಜೈಲು ಶಿಕ್ಷೆಯ ಮೂಲಕ ಆದೇಶಿಸುವುದಕ್ಕೆ ಅವಕಾಶಗಳಿವೆ. ಆದರೆ, ಲುಕ್‌ಔಟ್‌ ನೋಟಿಸ್‌ ಜಾರಿಗೆ ಅವಕಾಶವಿಲ್ಲ ಎಂದು ಪೀಠ ತಿಳಿಸಿದೆ.

https://www.newsics.com/2025/12/27/the-ghilli-actor-finally-becomes-a-captain/

 

TAGGED:Family court has no authority to issue lookout notice: High Court
Share This Article
Facebook Twitter Copy Link Print
Previous Article ಕೊನೆಗೂ ಕ್ಯಾಪ್ಟನ್‌ ಪಟ್ಟಕ್ಕೇರಿದ ಗಿಲ್ಲಿ ನಟ :ಆರಂಭದಲ್ಲೇ ನಿಯಮ ಮುರಿದಿದ್ದಕ್ಕೆ ಬಿಗ್ ಬಾಸ್ ಎಚ್ಚರಿಕೆ
Next Article ದೇಶದಲ್ಲೇ ಇದು ಮೊದಲ ಪ್ರಕರಣ: ಪಾರಿವಾಳಗಳಿಗೆ ಆಹಾರ ನೀಡಿದ್ದಕ್ಕೆ ಉದ್ಯಮಿಗೆ 5 ಸಾವಿರ ರೂಪಾಯಿ ದಂಡ ವಿಧಿಸಿದ ಕೋರ್ಟ್

Popular Posts

Dakshina Kannada Baby Died ದಕ್ಷಿಣ ಕನ್ನಡದಲ್ಲಿ ಭೀಕರ ದುರಂತ: ಶಾಲಾ ಬಸ್ ಮೇಲೆ ಮರ ಬಿದ್ದು 5 ವರ್ಷದ ಬಾಲಕಿ ಸಾವು

1 Min Read

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?