Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚಿತ್ರದುರ್ಗ, ಡಿಸೆಂಬರ್ 28: ಮೊದಲ ಪೋಕ್ಸೋ ಪ್ರಕರಣ ಸಂಬಂಧ ಡಾ. ಶಿವಮೂರ್ತಿಮುರುಘಾ ಶರಣರಿಗೆ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಬಿಗ್ ರಿಲೀಫ್ ನೀಡಿರುವ ನಡುವೆ ಅವರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಮಠದ ಆಡಳಿತದಲ್ಲಿ ಮುರುಘಾ ಶರಣರ ಹಸ್ತಕ್ಷೇಪಕ್ಕೆ ನ್ಯಾಯಾಲಯದ ನಿರ್ಬಂಧದ ನಡುವೆ ಮಠದ ಆಸ್ತಿ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿರುವ 2 ಕೋಟಿ ರೂ. ಮೌಲ್ಯದ ಒಟ್ಟು ನಾಲ್ಕು ನಿವೇಶನಗಳನ್ನು ಮಂಜುನಾಥ್ ಎಂಬುವರಿಗೆ ಸ್ಪೇಷಲ್ ಜಿಪಿಎ ನೀಡಿ ಮಾರಾಟ ಮಾಡಲಾಗಿದೆ. ಈ ಬಗ್ಗೆ ಪ್ರಕಾಶ್ ಎಂಬುವರು ಮಠದ ಆಡಳಿತ ಸಮಿತಿ ಅಧ್ಯಕ್ಷ ಶಿವಯೋಗಿ ಕಳಸದ್ಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರೋ ಶಿವಯೋಗಿ ಅವರು, ಕಾನೂನು ತಜ್ಞರಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
20ಯ22ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪೋಕ್ಸೋ ಕೇಸ್ ಸಂಬಂಧ ಮುರುಘಾ ಶ್ರೀ ನಿರ್ದೋಷಿ ಎಂದು ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಹೇಳಿತ್ತು. ಮಠದ ಹಾಸ್ಟೆಲ್ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ದೂರು ನೀಡಿದ್ದರು. ಆಗಸ್ಟ್ 27ರಂದು ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿತ್ತು. 2022ರ ಸೆಪ್ಟಂಬರ್ 1ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿಯನ್ನ ಪೊಲೀಸರು ಬಂಧಿಸಿದ್ದರು. ಚಾರ್ಜ್ಶೀಟ್ ವೇಳೆ ಎ3 ಬಸವಾದಿತ್ಯ, ಎ5 ವಕೀಲ ಗಂಗಾಧರಯ್ಯ ಅವರನ್ನು ಕೈಬಿಡಲಾಗಿತ್ತು. ಪ್ರಕರದ ವಿಚಾರಣೆ ನಡೆಸಿ ನ್ಯಾಯಾಲಯ ಮುರುಘಾ ಶರಣರ ಜೊತೆ 2ನೇ ಆರೋಪಿ ರಶ್ಮಿ, 4ನೇ ಆರೋಪಿ ಪರಮಶಿವಯ್ಯ ಕೂಡ ನಿರ್ದೋಷಿ ಎಂದು ಇತ್ತೀಚೆಗೆ ತೀರ್ಪು ಪ್ರಕಟಿಸಿತ್ತು.

ನಿಯಂತ್ರಣ ತಪ್ಪಿ ಪ್ಯಾರಾಗ್ಲೈಡರ್ ಅಪಘಾತ : ಪೈಲಟ್ ಸಾವು, ಓರ್ವ ಪ್ರವಾಸಿಗನ ಸ್ಥಿತಿ ಗಂಭೀರ