Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 31 ರಂದು ಮದ್ಯ ಮಾರಾಟದ ಅವಧಿಯನ್ನು ವಿಸ್ತರಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಿಎಲ್ 5 ಸಹ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಹೊಸ ವರ್ಷದ ಆಚರಣೆಗೆ ನಾಲ್ಕು ದಿನಗಳಷ್ಟೇ ಬಾಕಿಯಿದ್ದು, ಬೆಂಗಳೂರು ನಗರದಾದ್ಯಂತ ಪೊಲೀಸ್ ಪಹರೆ ಹೆಚ್ಚಿಸಲಾಗಿದೆ. ವಾಹನ ತಪಾಸಣೆ ಬಿಗಿಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಪೊಲೀಸರು ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.