Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರೇಬಿಸ್ ಸೋಂಕಿತ ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಿದ ರಾಯ್ತ ಸೇವಿಸಿದ 200 ಮಂದಿ; ಆಮೇಲೆನಾಯ್ತು?
ದೇಶಪ್ರಮುಖ

ರೇಬಿಸ್ ಸೋಂಕಿತ ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಿದ ರಾಯ್ತ ಸೇವಿಸಿದ 200 ಮಂದಿ; ಆಮೇಲೆನಾಯ್ತು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ರೇಬಿಸ್‌ ಸೋಂಕಿತ ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಿದ ರಾಯ್ತವನ್ನು(ಮೊಸರು ಬಜ್ಜಿ) ಸುಮಾರು 200ಕ್ಕೂ ಜನ ಸೇವಿಸಿರುವ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದಲ್ಲಿ ನಡೆದಿದೆ.

ಮುಂಜಾಗೃತಾ ಕ್ರಮವಾಗಿ ಈಗಾಗಲೇ ಎಲ್ಲರಿಗೂ ರೇಬಿಸ್‌ ಲಸಿಕೆಯನ್ನು ನೀಡಲಾಗಿದೆ. ಗ್ರಾಮಸ್ಥರ ಪ್ರಕಾರ ಡಿಸೆಂಬರ್ 23ರಂದು ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆ ವೇಳೆ ರೈತಾ ನೀಡಲಾಗಿತ್ತು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು 200ಕ್ಕೂ ಹೆಚ್ಚು ಜನರು ಆ ರೈತಾವನ್ನು ಸೇವಿಸಿದ್ದರು. ಸ್ವಲ್ಪ ಸಮಯದ ನಂತರ ಆ ರಾಯ್ತವನ್ನು ಕೆಲ ದಿನಗಳ ಹಿಂದೆ ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ತಯಾರಿಸಲಾಗಿದೆ ಎಂಬ ಮಾಹಿತಿ ಗೊತ್ತಾಗಿದೆ. ಆ ಎಮ್ಮೆ ಡಿಸೆಂಬರ್ 26ರಂದು ಮೃತಪಟ್ಟಿದ್ದು, ಇದರಿಂದಾಗಿ ಗ್ರಾಮಸ್ಥರಲ್ಲಿ ಸೋಂಕಿನ ಭಯ ಸೃಷ್ಟಿಯಾಗಿದೆ.

ಸದ್ಯ ರಾಯ್ತವನ್ನು ಸೇವಿಸಿದ ಎಲ್ಲರೂ ಉಜ್ಜೀನಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿ ರೇಬಿಸ್‌ ನಿರೋಧಕ ಲಸಿಕೆ ಪಡೆದುಕೊಂಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಡಾ. ರಮೇಶ್ವರ ಮಿಶ್ರಾ, “ಗ್ರಾಮದ ಒಂದು ಎಮ್ಮೆಯನ್ನು ರೇಬಿಸ್‌ ಸೋಂಕಿತ ನಾಯಿ ಕಚ್ಚಿದ್ದು, ನಂತರ ರೇಬಿಸ್‌ ಲಕ್ಷಣಗಳಿಂದ ಅದು ಮೃತಪಟ್ಟಿದೆ ಎಂಬ ಮಾಹಿತಿ ನಮಗೆ ಲಭಿಸಿದೆ. ಅದೇ ಎಮ್ಮೆಯ ಹಾಲಿನಿಂದ ತಯಾರಿಸಿದ ರಾಯ್ತವನ್ನು ಗ್ರಾಮಸ್ಥರು ಸೇವಿಸಿದ್ದಾರೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲರಿಗೂ ರೇಬಿಸ್‌ ಲಸಿಕೆ ಪಡೆಯಲು ಸಲಹೆ ನೀಡಲಾಗಿದೆ” ಎಂದು ಅವರು ಹೇಳಿದರು.

“ಚಿಕಿತ್ಸೆಗಿಂತ ಮುನ್ನೆಚ್ಚರಿಕೆ ಉತ್ತಮ, ಹಾಗಾಗಿ ಅನುಮಾನ ಇದ್ದವರೆಲ್ಲರಿಗೂ ಆ್ಯಂಟಿ-ರೇಬಿಸ್‌ ಲಸಿಕೆ ನೀಡಲಾಗಿದೆ. ಸಾಮಾನ್ಯವಾಗಿ ಹಾಲನ್ನು ಕುದಿಸಿದ ನಂತರ ರೇಬಿಸ್‌ ಅಪಾಯ ಇರುವುದಿಲ್ಲ. ಆದರೂ ಯಾವುದೇ ಸಂಭವನೀಯ ಅಪಾಯವನ್ನು ತಪ್ಪಿಸಲು ಲಸಿಕೆ ನೀಡಲಾಗಿದೆ” ಎಂದು ಮಿಶ್ರಾ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಪ್ರಕಾರ, ಈವರೆಗೆ ಗ್ರಾಮದಲ್ಲಿ ಯಾವುದೇ ರೋಗ ಹರಡಿಲ್ಲ ಮತ್ತು ಪರಿಸ್ಥಿತಿ ಸಾಮಾನ್ಯವಾಗಿದೆ. ಅಲ್ಲದೇ ಉಜ್ಜೀನಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಸಿಕೆಗಾಗಿ ಬಂದ ಎಲ್ಲರಿಗೂ ತಕ್ಷಣವೇ ಇಂಜೆಕ್ಷನ್ ನೀಡಲಾಗಿದೆ. ಲಸಿಕೆ ನೀಡಲೆಂದೇ ಶನಿವಾರ ಮತ್ತು ಭಾನುವಾರವೂ ಪ್ರಾಥಮಿಕ ಆರೋಗ್ಯ ಕೇಂದ್ರ/ಸಮುದಾಯ ಕೇಂದ್ರಗಳನ್ನು ತೆರೆಯಲಾಗಿತ್ತು ಎಂದು ತಿಳಿಸಿದ್ದಾರೆ. ಇನ್ನೂ ಯಾವುದೇ ವದಂತಿಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ನಿಗಾ ಇರಿಸಲಾಗಿದೆ ಎಂದು ಸಿಎಂಒ ಹೇಳಿದ್ದಾರೆ.

ಹೊಸ ವರ್ಷಕ್ಜೆ ಗುಡ್ ನ್ಯೂಸ್ ; ನೀರಿನ ಬಿಲ್‌ನ ಬಡ್ಡಿ 100% ಮನ್ನಾ

TAGGED:200 people ate raita made from buffalo milk bitten by a rabid dog; what happened next?
Share This Article
Facebook Twitter Copy Link Print
Previous Article ಹೊಸ ವರ್ಷಕ್ಜೆ ಗುಡ್ ನ್ಯೂಸ್ ; ನೀರಿನ ಬಿಲ್‌ನ ಬಡ್ಡಿ 100% ಮನ್ನಾ
Next Article ಹಸು ಸಗಣಿಯಿಂದ ಹಾಸಿಗೆ, ಸೀಟ್ ಕವರ್ ತಯಾರಿಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?