Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ‘ಧುರಂಧರ್ ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ ಮಿಸ್ ಆಗಿದೆ. 
ದೇಶಪ್ರಮುಖವಿದೇಶ

‘ಧುರಂಧರ್ ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ ಮಿಸ್ ಆಗಿದೆ. 

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಕ್ಷಯ್ ಖನ್ನಾ, ರಣವೀರ್ ಸಿಂಗ್ ಮುಂತಾದವರು ನಟಿಸಿರುವ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾದ ಕಲೆಕ್ಷನ್ 1100 ಕೋಟಿ ರೂಪಾಯಿ ಮೀರಿದೆ. ನಿರ್ಮಾಪಕರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ. ಇಂದಿಗೂ ಬಾಕ್ಸ್ ಆಫೀಸ್ನಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಲೇ ಇದೆ.
ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾ 800 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆ ಇದೆ. ಹಾಗಿದ್ದರೂ ಕೂಡ ‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ ಮಿಸ್ ಆಗಿದೆ. ಅದು ಹೇಗೆ ಎಂಬುದನ್ನು ವಿತರಕರು ವಿವರಿಸಿದ್ದಾರೆ.

ಬಾಲಿವುಡ್ ಸಿನಿಮಾಗಳಿಗೆ ವಿಶ್ವಾದ್ಯಂತ ಮಾರುಕಟ್ಟೆ ಇದೆ. ಮಿಡಲ್ ಈಸ್ಟ್ ದೇಶಗಳಲ್ಲಿ ಹಿಂದಿ ಸಿನಿಮಾಗಳನ್ನು ಜನರು ಮುಗಿಬಿದ್ದು ನೋಡುತ್ತಾರೆ. ಆದರೆ ‘ಧುರಂಧರ್’ ಸಿನಿಮಾವನ್ನು ಮಿಡಲ್ ಈಸ್ಟ್ ರಾಷ್ಟ್ರಗಳಲ್ಲಿ ಬ್ಯಾನ್ ಮಾಡಲಾಗಿದೆ. ಅದರಿಂದಾಗಿ ಈ ಚಿತ್ರಕ್ಕೆ ಆಗಬೇಕಿದ್ದ ಹೆಚ್ಚುವರಿ 90 ಕೋಟಿ ರೂಪಾಯಿಗಳು ನಷ್ಟ ಆಗಿವೆ ಎಂಬುದು ವಿತರಕರ ಲೆಕ್ಕಾಚಾರ.

ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ‘ಧುರಂಧರ್’ ಸಿನಿಮಾದಲ್ಲಿ ತೋರಿಸಲಾಗಿದೆ. ಪಾಕಿಸ್ತಾನ ನಡೆಸುವ ಭಯೋತ್ಪಾದಕ ಕೃತ್ಯಗಳನ್ನು ಎಳೆಎಳೆಯಾಗಿ ಈ ಸಿನಿಮಾದಲ್ಲಿ ಬಿಡಿಸಿ ಇಡಲಾಗಿದೆ. ಧರ್ಮದ ಹೆಸರಿನಲ್ಲಿ ಭಯೋತ್ಪಾದನೆ ಹೇಗೆ ನಡೆಯುತ್ತಿದೆ ಎಂಬುದನ್ನು ತೋರಿಸಲಾಗಿದೆ. ಧರ್ಮದ ಕುರಿತ ವಿಚಾರಗಳು ಪ್ರಸ್ತಾಪ ಆಗಿರುವುದರಿಂದ ಮಿಡಲ್ ಈಸ್ಟ್ ರಾಷ್ಟ್ರಗಳಲ್ಲಿ ಸಿನಿಮಾ ಬ್ಯಾನ್ ಆಗಿದೆ.
ಲೆಬೆನಾನ್, ಸಿರಿಯಾ, ಇಸ್ರೇಲ್, ಜೋರ್ಡನ್, ಸೌದಿ ಅರೇಬಿಯಾ, ಯೆಮನ್, ಓಮನ್, ಬರ್ಹೇನ್, ಖತಾರ್, ಯುನೈಟೆಡ್ ಅರಬ್ ಎಮಿರೈಟ್ಸ್, ಕುವೈತ್, ಇರಾಕ್, ಇರಾನ್ ದೇಶಗಳಲ್ಲಿ ‘ಧುರಂಧರ್’ ಸಿನಿಮಾದ ಪ್ರದರ್ಶನಕ್ಕೆ ಅವಕಾಶ ಸಿಕ್ಕಿಲ್ಲ. ಪಾಕಿಸ್ತಾನದಲ್ಲಿ ಕೂಡ ಈ ಸಿನಿಮಾ ಬಿಡುಗಡೆ ಆಗಿಲ್ಲ. ಹಾಗಿದ್ದರೂ ಕೂಡ ಪೈರಸಿ ಮೂಲಕ ಅಲ್ಲಿನ ಜನರು ಸಿನಿಮಾ ವೀಕ್ಷಿಸಿದ್ದಾರೆ.

ಅಕ್ಷಯ್ ಖನ್ನಾ ಅವರು ‘ಧುರಂಧರ್’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರೂ ಕೂಡ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದಿದ್ದಾರೆ. ಸಾರಾ ಅರ್ಜುನ್ ಅವರು ನಾಯಕಿಯಾಗಿ ಮಿಂಚಿದ್ದಾರೆ. ಭಾರತೀಯ ಗೂಢಚಾರಿ ಪಾತ್ರದಲ್ಲಿ ರಣವೀರ್ ಸಿಂಗ್ ಅವರು ಅಭಿಮಾನಿಗಳ ಮನ ಗೆದ್ದಿದ್ದಾರೆ. ಆದಿತ್ಯ ಧಾರ್ ಅವರ ನಿರ್ದೇಶನಕ್ಕೆ ಪ್ರೇಕ್ಷಕರು ಭೇಷ್ ಎಂದಿದ್ದಾರೆ. ಬಿಡುಗಡೆಯಾಗಿ 27 ದಿನಗಳು ಕಳೆದರೂ ಹೌಸ್ಫುಲ್ ಪ್ರದರ್ಶನ ಮುಂದುವರಿದಿದೆ.

ಎಷ್ಟು ಕುಡಿದರೂ ಕಿಡ್ನಿಗೆ ಏನೂ ಆಗಲ್ಲ ಎಣ್ಣೆ ಹೊಡೆಯೋಕು ಮುಂಚೆ 2 ಗಂಟೆ ಜಸ್ಟ್‌ ಹೀಗೆ ಮಾಡಿ.!

TAGGED:'Dhurandhar movie has missed out on an additional profit of Rs 90 crore.
Share This Article
Facebook Twitter Copy Link Print
Previous Article ಹೊಸ ವರ್ಷದ ರಾತ್ರಿ 12 ಗಂಟೆಗೆ 12 ದ್ರಾಕ್ಷಿಗಳನ್ನು ತಿನ್ನೋದೇಕೆ? ವಿಶಿಷ್ಟ ಸಂಪ್ರದಾಯ ಹೇಗೆ ಆರಂಭವಾಯಿತು?
Next Article HAPPY NEW YEAR 2026 ಎಲ್ಲೆಲ್ಲೂ ನ್ಯೂ ಇಯರ್ ಜೋಶ್, ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?