Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mystery Death ಬಯೋಕಾನ್ ಕಚೇರಿಯಲ್ಲೇ ಟೆಕ್ಕಿ ಸಾ*ವು, ಗೆಳತಿ‌ ಜತೆ ಮಾತಾಡುತ್ತಿದ್ದ ಅನಂತ್‌ಕುಮಾರ್‌ಗೇನಾಯ್ತು?
ಕರ್ನಾಟಕಪ್ರಮುಖ

Mystery Death ಬಯೋಕಾನ್ ಕಚೇರಿಯಲ್ಲೇ ಟೆಕ್ಕಿ ಸಾ*ವು, ಗೆಳತಿ‌ ಜತೆ ಮಾತಾಡುತ್ತಿದ್ದ ಅನಂತ್‌ಕುಮಾರ್‌ಗೇನಾಯ್ತು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಪ್ರತಿಷ್ಠಿತ ಕಂಪನಿಯಾದ ‘ಬಯೋಕಾನ್’ (Biocon) ಆವರಣದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಂಪನಿಯ ಆರನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು 26 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತನನ್ನು ಬೆಂಗಳೂರಿನ ಬನಶಂಕರಿ ಮೂಲದ ಅನಂತಕುಮಾರ್ (26) ಎಂದು ಗುರುತಿಸಲಾಗಿದೆ. ಅನಂತಕುಮಾರ್ ಬಯೋಕಾನ್ ಕಂಪನಿಯಲ್ಲಿ ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಂಗಳವಾರ ಮಧ್ಯಾಹ್ನದ ವೇಳೆಗೆ ಕಂಪನಿಯ ಕೆಫೆಟೇರಿಯಾ (Cafeteria) ಭಾಗದ ಬಾಲ್ಕನಿಯಲ್ಲಿ ನಿಂತು ತಮ್ಮ ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಆರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಬಹಳ ಎತ್ತರದಿಂದ ಕೆಳಕ್ಕೆ ಬಿದ್ದ ರಭಸಕ್ಕೆ ಅನಂತಕುಮಾರ್ ಅವರ ತಲೆ ಮತ್ತು ದೇಹಕ್ಕೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಕಂಪನಿಯ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಓಡಿ ಬಂದಿದ್ದರೂ ಅಷ್ಟರಲ್ಲೇ ಪ್ರಾಣಪಕ್ಷಿ ಹಾರಿಹೋಗಿತ್ತು. ಈ ದೃಶ್ಯ ಕಂಡು ಸ್ಥಳದಲ್ಲಿದ್ದ ಇತರ ಉದ್ಯೋಗಿಗಳು ದಿಗ್ಭ್ರಮೆಗೊಂಡಿದ್ದಾರೆ. ಇನ್ನು ಘಟನೆ ನಡೆದ ವೇಳೆ ಅನಂತಕುಮಾರ್ ಅವರು ಗೆಳತಿಯೊಂದಿಗೆ ಮಾತನಾಡುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಅವರು ಕಾಲು ಜಾರಿ ಬಿದ್ದಿದ್ದಾರೆಯೇ ಅಥವಾ ಈ ಸಾವಿನ ಹಿಂದೆ ಬೇರೆ ಏನಾದರೂ ಕಾರಣಗಳಿವೆಯೇ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಪ್ರತ್ಯಕ್ಷದರ್ಶಿಯಾಗಿರುವ ಗೆಳತಿಯ ಹೇಳಿಕೆಯು ಈ ಪ್ರಕರಣದಲ್ಲಿ ಅತ್ಯಂತ ಪ್ರಮುಖವಾಗಿದೆ.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪ್ರತಿಷ್ಠಿತ ಕಂಪನಿಯಲ್ಲೇ ಇಂತಹ ದುರಂತ ನಡೆದದ್ದು ಟೆಕ್ಕಿಗಳ ವಲಯದಲ್ಲಿ ಆತಂಕ ಮತ್ತು ವಿಷಾದ ಮೂಡಿಸಿದೆ.

ಯುವಕನ ಹೊಟ್ಟೆಯಲ್ಲಿತ್ತು ಕಬ್ಬಿಣದ ಸ್ಪ್ಯಾನರ್, 7 ಹಲ್ಲುಜ್ಜುವ ಬ್ರಶ್!

New year ಹೊಸ ವರ್ಷಾಚರಣೆಗೆ ರಾಜ್ಯದ ಜನ ರೆಡಿ: ಟೈಟಾಗಿ ಎಲ್ಲಾದ್ರೂ ಮಲಗಿದ್ರೆ ಮನೆಗೇ ಡ್ರಾಪ್ ಕೊಡತ್ತಂತೆ ಸರ್ಕಾರ!

TAGGED:Techie dies in Biocon office
Share This Article
Facebook Twitter Copy Link Print
Previous Article ಯುವಕನ ಹೊಟ್ಟೆಯಲ್ಲಿತ್ತು ಕಬ್ಬಿಣದ ಸ್ಪ್ಯಾನರ್, 7 ಹಲ್ಲುಜ್ಜುವ ಬ್ರಶ್!
Next Article ಹಿರಿಯ ವಕೀಲರ ಪತ್ನಿಯ ಭೀಕರ ಕೊಲೆ – ಪಕ್ಕದ ಚೇರ್​​ನಲ್ಲಿದ್ದ ಸಹಾಯಕ!

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?