Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮದ ಸುಪ್ರಸಿದ್ಧ ಪುರಾಣ ಪ್ರಸಿದ್ಧ ‘ತೋಪಿನ ತಿಮ್ಮಪ್ಪ’ ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆಯಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ನಡೆದು ಅಧಿಕಾರಿಗಳು ಸ್ಥಳದಿಂದ ತೆರಳಿದ್ದಾರೆ.ಆಬಲವಾಡಿ ಗ್ರಾಮದ ಈ ಪುರಾತನ ದೇವಾಲಯವನ್ನು ಈವರೆಗೆ ‘ತೋಪಿನ ತಿಮ್ಮಪ್ಪ ಸೇವಾ ಟ್ರಸ್ಟ್’ ವತಿಯಿಂದ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಾಗುತ್ತಿತ್ತು. ಈ ಹಿಂದೆ ಚಿಕ್ಕದಾಗಿದ್ದ ದೇಗುಲವನ್ನು ಗ್ರಾಮಸ್ಥರು ಹಾಗೂ ಟ್ರಸ್ಟ್ ಸದಸ್ಯರು ಸೇರಿ ದೇಣಿಗೆ ಸಂಗ್ರಹಿಸಿ ಜೀರ್ಣೋದ್ಧಾರ ಮಾಡಿದ್ದರು. ಆದರೆ, ದೇಗುಲವನ್ನು ಸರ್ಕಾರದ ಸುಪರ್ದಿಗೆ ವಹಿಸಬೇಕು ಎಂದು ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯವು ದೇವಾಲಯವನ್ನು ಮುಜರಾಯಿ ಇಲಾಖೆಗೆ ಹಸ್ತಾಂತರಿಸುವಂತೆ ಆದೇಶ ನೀಡಿತ್ತು.
ನ್ಯಾಯಾಲಯದ ಆದೇಶ ಹಿನ್ನೆಲೆಯಲ್ಲಿ ದೇವಸ್ಥಾನ ಸುಪರ್ದಿಗೆ ಪಡೆಯಲು ಮಂಡ್ಯ ಜಿಲ್ಲಾಡಳಿತ ಮುಂದಾಗಿದೆ. ಸುಪರ್ದಿಗೆ ತೆಗೆದುಕೊಳ್ಳುವಂತೆ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸರ್ಕಾರ ಸುಪರ್ದಿಗೆ ತೆಗೆದುಕೊಳ್ಳುವಂತೆ ನ್ಯಾಯಾಲಯ ಆದೇಶಿಸಿತ್ತು. ತಹಶೀಲ್ದಾರ್ ಪರಶುರಾಮ್ ನೇತೃತ್ವದಲ್ಲಿ ಸುಪರ್ದಿಗೆ ಪಡೆಯಲು ಯತ್ನಿಸಲಾಗಿದೆ. ಅಧಿಕಾರಿಗಳನ್ನು ತಡೆದ ಅಗಲವಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಹೆಚ್ಚಾದ ನಂತರ ಎರಡು ದಿನ ಕಾಲಾವಕಾಶ ನೀಡಿದ ಅಧಿಕಾರಿಗಳು ಸ್ಥಳದಿಂದ ತೆರಳಿದ್ದಾರೆ.