Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ನ್ಯೂ ಇಯರ್ ಸಂಭ್ರಮಾಚರಣೆಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಜನರು ಸಜ್ಜಾಗಿದ್ದಾರೆ. ಪೊಲೀಸ್ ಇಲಾಖೆ ಕೂಡ ಅಹಿತಕರ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಿದೆ.
ಎಣ್ಣೆ ಏಟಿನಲ್ಲಿ ಎಲ್ಲಾದರೂ ಮಲಗಿದರೆ ಪೊಲೀಸರೇ ಮನೆಗೆ ಬಿಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಎಲ್ಲೆಡೆ ಪೊಲೀಸ್ ಹದ್ದಿನ ಕಣ್ಣು
ಹೊಸ ವರ್ಷಾಚರಣೆಗೆ ಕೌಂಟ್ಡೌನ್ ಶುರುವಾಗಿದೆ.
ಬೆಂಗಳೂರಿಗರೂ ನ್ಯೂ ಇಯರ್ ಸ್ವಾಗತಿಸೋದಕ್ಕೆ ಕಾತರರಾಗಿದ್ದಾರೆ. ಅತಿ ಹೆಚ್ಚು ಜನರು ಸೇರುವ ಎಂ.ಜಿ.ರೋಡ್, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಕೋರಮಂಗಲ ಸೇರಿ ಹಲವೆಡೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.
ಬ್ರಿಗೇಡ್ ರಸ್ತೆಯೊಂದರಲ್ಲೇ 360ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಿದ್ದು, ಬೆಂಗಳೂರು ನಗರದಾದ್ಯಂತ 6 ಸಾವಿರ ಹೆಚ್ಚುವರಿ ಕ್ಯಾಮರಾ ಅಳವಡಿಸಲಾಗಿದೆ. ಹಲವೆಡೆ ರಸ್ತೆಯುದ್ದಕ್ಕೂ ಬ್ಯಾರಿಕೇಡ್ ಹಾಕಿದ್ದಾರೆ. ಪೊಲೀಸ್ ಹಿರಿಯ ಅಧಿಕಾರಿಗಳು ಭದ್ರತೆ ಬಗ್ಗೆ ಪರಿಶೀಲಿಸಿದ್ದಾರೆ.
ಹೊಸ ವರ್ಷಾಚರಣೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ನೀವೇನಾದರೂ ಎಲ್ಲಾದರೂ ಮಲಗಿದರೆ ಪೊಲೀಸರೇ ಮನೆಗೆ ತಲುಪಿಸುತ್ತಾರೆ ಎಂದಿದ್ದಾರೆ. ಇದಕ್ಕೆ ಪರಮೇಶ್ವರ್ ಕೂಡ ದನಿಗೂಡಿಸಿದ್ದಾರೆ.
ಹೋಟೆಲ್ಗಳೂ ಹೊಸ ವರ್ಷಾಚರಣೆಗೆ ಸಜ್ಜಾಗಿವೆ. ಡಿಸೆಂಬರ್ 31 ಮತ್ತು ಜನವರಿ 1ರಂದು ಬೆಂಗಳೂರಿನ ರೆಸ್ಟೋರೆಂಟ್ಗಳಲ್ಲಿ ಹೆಚ್ಚಿನ ವ್ಯಾಪಾರ ವಹಿವಾಟು ನಿರೀಕ್ಷೆಯಿದೆ. ಆದರೆ ಎಂಜಿ ರಸ್ತೆ, ರೆಸಿಡೆನ್ಸಿ ರಸ್ತೆ ಸುತ್ತಮುತ್ತಲು ಮಾತ್ರ ವ್ಯಾಪಾರ ವಹಿವಾಟು ಡಲ್ ಹೊಡೆಯುವ ಭೀತಿಯಿದೆ. ಈ ಭಾಗದಲ್ಲಿ ವಾಹನಗಳ ಓಡಾಟ ಹಾಗೂ ಪಾರ್ಕಿಂಗ್ ಬಂದ್ ಮಾಡೋದ್ರಿಂದ ಗ್ರಾಹಕರ ಸಂಖ್ಯೆಯೂ ಕಡಿಮೆಯಾಗಲಿದ್ದು, ರೆಸ್ಟೋರೆಂಟ್ಗಳಿಗೆ ಸಂಕಷ್ಟ ಎದುರಾಗಲಿದೆ.
ರಾಜ್ಯದ ಮೂಲೆ ಮೂಲೆಯಲ್ಲೂ ಹೊಸ ವರ್ಷಾಚರಣೆ ಮೇಲೆ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಡ್ರಗ್ಸ್ ಪಾರ್ಟಿ ಆಯೋಜನೆಗೆ ಸಿದ್ಧತೆ ಮಾಡಿಕೊಂಡ ಶಂಕೆ ಹಿನ್ನೆಲೆ, ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ನಿಯ ಒಪ್ಪಿಗೆ ಇಲ್ಲದೆ ಮದ್ಯ ಸೇವಿಸಿದರೆ ಎಷ್ಟು ವರ್ಷ ಜೈಲು ಶಿಕ್ಷೆ?
ಹೆಂಡ್ತಿಗೆ ಹೆರಿಗೆ ನೋವು : ಆಸ್ಪತ್ರೆಗೆ ಕರೆದೊಯ್ಯುವ ಆತಂಕದಲ್ಲಿ ಆಕೆಯನ್ನೇ ಬಿಟ್ಟು ಹೋದ ಗಂಡ – ವೈರಲ್ ವಿಡಿಯೋ ನೋಡಿ