Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಊರು ಹಬ್ಬ, ಜಾತ್ರೆ-ಉತ್ಸವದಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ
ಆರೋಗ್ಯಪ್ರಮುಖ

ಊರು ಹಬ್ಬ, ಜಾತ್ರೆ-ಉತ್ಸವದಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಸರ್ವಜನಿಕರು ಊರು ಹಬ್ಬ, ಜಾತ್ರೆ-ಉತ್ಸವ ಮುಂತಾದ ಧಾರ್ಮಿಕ ಆಚರಣೆಗಳ ಸಂದರ್ಭದಲ್ಲಿ ಜನತೆಯು ಕುಡಿಯಲು ಶುದ್ಧ ನೀರು ಬಳಸಬೇಕು. ಸೇವಿಸುವ ಆಹಾರ ಸಂಪೂರ್ಣವಾಗಿ ಬೇಯಿಸಿ ಸೇವಿಸುವ ಮೂಲಕ ಸಂಭಾವ್ಯ ವಾಂತಿ ಬೇಧಿ ಪ್ರಕರಣಗಳು ಸಂಭವಿಸದಂತೆ ಆರೋಗ್ಯ ಇಲಾಖೆಯ ಜೊತೆಗೆ ಕೈ ಜೋಡಿಸಬೇಕು ಎಂದು ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಗ್ರಾಮ / ಪಟ್ಟಣಗಳಲ್ಲಿ ನಡೆಯುವ ಎಲ್ಲಾ ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳಲ್ಲಿನ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಳ್ಳಬೇಕು ಹಾಗೂ ಆರೋಗ್ಯ ಇಲಾಖೆಯ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಅವರು ಹೇಳಿದ್ದಾರೆ.
ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳು ನಡೆಯುವ ಪ್ರದೇಶದಲ್ಲಿ ಆರೋಗ್ಯ ಇಲಾಖೆಯಿಂದ ತಾತ್ಕಾಲಿಕ ಚಿಕಿತ್ಸಾ ಕೇಂದ್ರ ಸ್ಥಾಪಿಸಲಾಗುವುದು.

ಅಗತ್ಯ ಔಷಧಿ ದಾಸ್ತಾನುಗಳೊಂದಿಗೆ ಕರ್ತವ್ಯ ನಿರ್ವಹಿಸಲು ವೈದ್ಯರು/ಸಿಬ್ಬಂದಿಗಳನ್ನು ನೇಮಿಸಲಾಗುವುದು. ದೊಡ್ಡ ಜಾತ್ರೆಗಳಲ್ಲಿ ತಾತ್ಕಾಲಿಕ ಆಸ್ಪತ್ರೆ ಪ್ರಾರಂಭಿಸಲಾಗುವುದು. ಕ್ಲೋರೋಸ್ಕೋಪ್ ಮೂಲಕ ಕುಡಿಯುವ ನೀರನ್ನು ಪರೀಕ್ಷೆ ಮಾಡಿ ನೀರು ಕುಡಿಯಲು ಯೋಗ್ಯವಿದೆ ಎಂದು ಖಾತರಿ ಆದ ನಂತರ ನೀರು ಕುಡಿಯಲು ಸರಬರಾಜು ಮಾಡಲು ತಿಳಿಸಲಾಗುವುದು ಎಂದಿದ್ದಾರೆ.ಸಾರ್ವಜನಿಕರಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಬಗ್ಗೆ ಆರೋಗ್ಯ ಶಿಕ್ಷಣವನ್ನು ನೀಡಲಾಗುವುದು. ಆರೋಗ್ಯ ಇಲಾಖೆಯ ಸೇವೆಗಳು ಮತ್ತು ಆರೋಗ್ಯ ಮಾಹಿತಿಯ ಕುರಿತು ಕರ ಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ನೀಡಲಾಗುವುದು.

ಜಾತ್ರೆಗಳು, ಉತ್ಸವಗಳು ಮತ್ತು ಉರುಸುಗಳು ನಡೆಯುವ ಮುಂಚೆಯೇ ಆ ಪ್ರದೇಶದಲ್ಲಿ ಎಲ್ಲಾ ನೀರಿನ ಮೂಲಗಳ ಮಾದರಿಗಳನ್ನು ಸಂಗ್ರಹಿಸಿ ಜೈವಿಕ ಪರೀಕ್ಷೆಗೆ ಒಳಪಡಿಸಲಾಗುವುದು. ದುರಸ್ಥಿಯಲ್ಲಿರುವ ಶುದ್ಧ ನೀರಿನ ಘಟಕಗಳನ್ನು ಅತೀ ಜರೂರಾಗಿ ಸರಿಪಡಿಸಿ ಗ್ರಾಮದ ಜನತೆಗೆ ಕುಡಿಯಲು ಶುದ್ಧ ಹಾಗೂ ಸ್ವಚ್ಛ ನೀರು ಸರಬರಾಜು ಮಾಡುವುದು. ಓವರ್ ಹೆಡ್ ಟ್ಯಾಂಕ್ ಅಥವಾ ಕೆರೆಯಿಂದ ಗ್ರಾಮಕ್ಕೆ ಸರಬರಾಜು ಆಗುವ ನೀರನ್ನು ಕ್ಲೋರಿನೇಷನ್ ಮಾಡಿದ ನಂತರ ಸರಬರಾಜು ಮಾಡುವಂತೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.

ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಸ್ವಚ್ಚ ಹಾಗೂ ಶುದ್ಧ ಕ್ಲೋರಿನೇಷನ್ ಮಾಡಿದ ನೀರನ್ನು ನಿಗದಿತ ಸ್ಥಳಗಳಲ್ಲಿ ಟ್ಯಾಂಕರ್ ಗಳ ಮೂಲಕ ಸರಬರಾಜು ಮಾಡಲು ತಿಳಿಸಲಾಗುವುದು. ದೇವಸ್ಥಾನದ ಸುತ್ತ ಮುತ್ತಲಿನ ಆವರಣ ಪರಿಶೀಲನೆ ಮಾಡಿ ಕಸದ ವಿಲೇವಾರಿಗಾಗಿ ಕಸದ ಬುಟ್ಟಿಗಳ ವ್ಯವಸ್ಥೆ ಮಾಡುವ ಮೂಲಕ ನೈರ್ಮಲ್ಯ ಕಾಪಾಡಿಕೊಳ್ಳುವುದರ ಕುರಿತು ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ತಾಲೂಕ ಪಂಚಾಯತ್, ಜಿಲ್ಲಾ ಪಂಚಾಯತಿ ಅಧಿಕಾರಿಗಳು/ಸಿಬ್ಬಂದಿಗಳು ಕ್ರಮ ವಹಿಸುವರು ಎಂದಿದ್ದಾರೆ.

ಜಾತ್ರೆಯಲ್ಲಿ ತೆರೆದಿಟ್ಟ ಸಿಹಿ ಪದಾರ್ಥ, ಕತ್ತರಿಸಿ ತೆರೆದಿಟ್ಟ ಹಣ್ಣುಗಳನ್ನು ಮುಚ್ಚಿಟ್ಟು ಮಾರಾಟ ಮಾಡದಂತೆ ಕ್ರಮ ವಹಿಸಲಾಗಿದೆ. ಜಾತ್ರೆ-ಹಬ್ಬದ ಬಳಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ನಿರ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಸಿಗರೇಟ್, ಬೀಡಿ ಮತ್ತು ಪಾನ್ ಮಸಾಲಾ ಮೇಲೆ ಎಷ್ಟು ಜಿಎಸ್ಟಿ ವಿಧಿಸಲಾಗುವುದು?

TAGGED:Important announcement to the public:
Share This Article
Facebook Twitter Copy Link Print
Previous Article ದಿ ರಾಜಾ ಸಾಬ್ ಸಿನಿಮಾದ ನಿರ್ದೇಶಕನ ಸಂಭಾವನೆ ಎಷ್ಟು ಕೋಟಿ?
Next Article Health ಹುಣಸೆಹಣ್ಣು ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆ ಬರೋದೇ ಇಲ್ಲ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?