Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ದೊಡ್ಡಬಳ್ಳಾಪುರ: ಹೊಸ ವರ್ಷದ ಸಂಭ್ರಮದಲ್ಲಿದ್ದವರಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿ ಬಳಿಯ ಈಚೀಸ್ ರೆಸಾರ್ಟ್ನಲ್ಲಿ ನಡೆಯುತ್ತಿದ್ದ ಪಾರ್ಟಿಗೆ ಖಾಕಿ ಬ್ರೇಕ್ ಹಾಕಿದೆ.40 ಮಂದಿ ಯುವಕರಿಂದ ಪಾರ್ಟಿ ಆಯೋಜನೆ ಮಾಡಲಾಗಿತ್ತು. ದಾಳಿ ವೇಳೆ ಸಾಕಷ್ಟು ಮದ್ಯ ವಶಕ್ಕೆ ಪಡೆಯಲಾಗಿದೆ. ಮದ್ಯದ ಬಾಟಲಿ, ಸೌಂಡ್ ಬಾಕ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ದಾಳಿ ಬಳಿಕ ಖಾಸಗಿ ರೆಸಾರ್ಟ್ ಮಾಲೀಕನ ಮೇಲೆ ಪ್ರಕರಣ ದಾಖಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿದ್ದು, ತನಿಖೆ ನಡೆದಿದೆ.